
ಬೆಂಗಳೂರು: ನಗರದ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸಮಕ್ಷಮ ಬಿಜೆಪಿ ನಾಯಕರ ಸಭೆ ನಡೆಯುತ್ತಿದೆ.
ಮಸ್ಕಿ, ಬಸವಕಲ್ಯಾಣ ಕ್ಷೇತ್ರಗಳ ಉಪ ಚುನಾವಣೆ ಮತ್ತು ಗ್ರಾಮ ಪಂಚಾಯಿತಿ ಚುನಾವಣೆ, ಗ್ರಾಮ ಸ್ವರಾಜ್ಯ ಸಮಾವೇಶಕ್ಕೆ ಸಿದ್ಧತೆ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ಹೇಳಿವೆ.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಡಿಸಿಎಂಗಳಾದ ಲಕ್ಷ್ಮಣ ಸವದಿ, ಡಾ.ಅಶ್ವತ್ಥ್ ನಾರಾಯಣ, ಸಚಿವರಾದ ಈಶ್ವರಪ್ಪ, ಆರ್.ಅಶೋಕ್, ಶ್ರೀರಾಮುಲು ಸೇರಿದಂತೆ ಹಲವು ಶಾಸಕರು, ಸಂಸದರು, ಜಿಲ್ಲಾ ಘಟಕದ ಅಧ್ಯಕ್ಷರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.