ಬೆಂಕಿ ಪೊಟ್ಟಣ ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ, ಕ್ಷಣಾರ್ಧದಲ್ಲೇ ಧಗಧಗ
ವಿಜಯಪುರ: ಬೆಂಕಿ ಪೊಟ್ಟಣ ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ ಹತ್ತಿಕೊಂಡು ಕ್ಷಣಾರ್ಧದಲ್ಲೇ ಧಗಧಗನೆ ಹೊತ್ತಿ ಉರಿದ ಘಟನೆ ಅರಕೇರಿ ತಾಂಡಾ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ನಡೆದಿದೆ. ತಮಿಳುನಾಡು ಮೂಲದ ಲಾರಿ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಬೆಂಕಿ ಪೊಟ್ಟಣ ಸಾಗಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಬೆಂಕಿ ತಗುಲಿದ ತಕ್ಷಣ ಲಾರಿಯಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಲಾರಿಯಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ13ರಲ್ಲಿ ಸಂಚಾರ ವ್ಯತ್ಯಯವಾಗಿದೆ. ವಿಜಯಪುರ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ವಿಜಯಪುರ ಗ್ರಾಮೀಣ […]
Follow us on
ವಿಜಯಪುರ: ಬೆಂಕಿ ಪೊಟ್ಟಣ ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ ಹತ್ತಿಕೊಂಡು ಕ್ಷಣಾರ್ಧದಲ್ಲೇ ಧಗಧಗನೆ ಹೊತ್ತಿ ಉರಿದ ಘಟನೆ ಅರಕೇರಿ ತಾಂಡಾ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ನಡೆದಿದೆ. ತಮಿಳುನಾಡು ಮೂಲದ ಲಾರಿ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಬೆಂಕಿ ಪೊಟ್ಟಣ ಸಾಗಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಬೆಂಕಿ ತಗುಲಿದ ತಕ್ಷಣ ಲಾರಿಯಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಲಾರಿಯಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ13ರಲ್ಲಿ ಸಂಚಾರ ವ್ಯತ್ಯಯವಾಗಿದೆ. ವಿಜಯಪುರ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.