ಸೂಕ್ತ ಸಮಯಕ್ಕೆ ಬಾರದ ಆಸ್ಪತ್ರೆ ಸಿಬ್ಬಂದಿ, ಮಗುವಿಗೆ ಜನ್ಮ ನೀಡಿ.. ಗರ್ಭಿಣಿ ಸಾವು

| Updated By: ಸಾಧು ಶ್ರೀನಾಥ್​

Updated on: Nov 09, 2020 | 11:20 AM

ದಾವಣಗೆರೆ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಗಂಡು ಮಗುವಿಗೆ ಜನ್ಮ ನೀಡಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಖೌರುವುನ್ನಿಸಾ (25) ಮೃತ ದುರ್ದೈವಿ. ಖೌರುವುನ್ನಿಸಾಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಆಕೆಯನ್ನು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು. ಆದರೆ ಸಕಾಲಕ್ಕೆ ಆಸ್ಪತ್ರೆಯ ಸಿಬ್ಬಂದಿ ಬಾರದ ಹಿನ್ನೆಲೆ ಗರ್ಭಿಣಿಯನ್ನು ಚನ್ನಗಿರಿ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ. ಬಳಿಕ ಚನ್ನಗಿರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ […]

ಸೂಕ್ತ ಸಮಯಕ್ಕೆ ಬಾರದ ಆಸ್ಪತ್ರೆ ಸಿಬ್ಬಂದಿ, ಮಗುವಿಗೆ ಜನ್ಮ ನೀಡಿ.. ಗರ್ಭಿಣಿ ಸಾವು
Follow us on

ದಾವಣಗೆರೆ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಗಂಡು ಮಗುವಿಗೆ ಜನ್ಮ ನೀಡಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಖೌರುವುನ್ನಿಸಾ (25) ಮೃತ ದುರ್ದೈವಿ.

ಖೌರುವುನ್ನಿಸಾಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಆಕೆಯನ್ನು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು. ಆದರೆ ಸಕಾಲಕ್ಕೆ ಆಸ್ಪತ್ರೆಯ ಸಿಬ್ಬಂದಿ ಬಾರದ ಹಿನ್ನೆಲೆ ಗರ್ಭಿಣಿಯನ್ನು ಚನ್ನಗಿರಿ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ.

ಬಳಿಕ ಚನ್ನಗಿರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಖೌರುವುನ್ನಿಸಾ ಸ್ಥಿತಿ ಗಂಭೀರವಾಗಿತ್ತು. ಹಾಗಾಗಿ ಹೆಚ್ಚಿನ ಚಿಕಿತ್ಸೆಗೆ ಆಕೆಯನ್ನು ಶಿವಮೊಗ್ಗಕ್ಕೆ ರವಾನೆ ಮಾಡಲಾಗಿದೆ. ಆದರೆ ತೀವ್ರ ನೋವಿನಿಂದ ಬಳಲುತ್ತಿದ್ದ ಖೌರುವುನ್ನಿಸಾ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.

ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡಲು ವಿಳಂಬ ಮಾಡಿದ್ದಾರೆ ಎಂದು ಆರೋಪಿಸಿ ವೈದ್ಯರ ವಿರುದ್ಧ ಮಹಿಳೆ ಸಂಬಂಧಿಕರು ಹಾಗೂ ಗ್ರಾಮಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.