ಬೆಂಗಳೂರು: ಟ್ರಿನಿಟಿ, ಹಲಸೂರು ಮೆಟ್ರೋ ನಿಲ್ದಾಣದಲ್ಲಿ ದುರಸ್ತಿ ಕಾರ್ಯ ಹಿನ್ನೆಲೆಯಲ್ಲಿ, ಜ.31ರಂದು 2 ಗಂಟೆಗಳ ಕಾಲ ಮೆಟ್ರೋ ರೈಲು ಸೇವೆ ಸ್ಥಗಿತವಾಗಲಿದೆ. ನಗರದ ಎಂ.ಜಿ.ರಸ್ತೆಯಿಂದ ಬೈಯ್ಯಪ್ಪನಹಳ್ಳಿವರೆಗೆ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ. ಭಾನುವಾರ ಬೆಳಗ್ಗೆ 7ರಿಂದ 9 ಗಂಟೆವರೆಗೆ ಸಂಚಾರ ವ್ಯತ್ಯಯವಾಗಲಿದೆ. 9 ಗಂಟೆಯ ಬಳಿಕ ಮೆಟ್ರೋ ರೈಲು ಸೇವೆ ಎಂದಿನಂತೆ ಆರಂಭಗೊಳ್ಳಲಿದೆ.
ದುರಸ್ತಿ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ನೇರಳೆ ಮಾರ್ಗದಲ್ಲಿ ಸೇವೆ ವ್ಯತ್ಯಯವಾಗಲಿದೆ. ಎಂ.ಜಿ.ರಸ್ತೆಯಿಂದ ಬೈಯ್ಯಪ್ಪನಹಳ್ಳಿವರೆಗೆ ಮಾತ್ರ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದ್ದು, ಉಳಿದಂತೆ ಮೈಸೂರು ರಸ್ತೆಯಿಂದ ಎಂ.ಜಿ.ರಸ್ತೆವರೆಗೆ ಮೆಟ್ರೋ ರೈಲು ಎಂದಿನಂತೆ ಸಂಚಾರ ಮಾಡಲಿದೆ.
ಕಿಸಾನ್ ರೈಲು ಮತ್ತು ಮೊದಲ ಚಾಲಕ ರಹಿತ ಮೆಟ್ರೋ ರೈಲು ಸಂಚಾರಕ್ಕೆ ಇಂದು ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ
ಲೋಕಾರ್ಪಣೆಗೆ ಸಿದ್ಧವಾಯ್ತು ಯಲಚೇನಹಳ್ಳಿ-ಅಂಜನಾಪುರ ನಡುವಿನ ನಮ್ಮ ಮೆಟ್ರೋ ವಿಸ್ತೃತ ಮಾರ್ಗ