AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ವಪಕ್ಷಗಳ ಸಭೆ ನಿರ್ಣಯ ಏನಾಯ್ತು? ಸುದ್ದಿಗೋಷ್ಠಿಯಲ್ಲಿ ಅಶೋಕ್ ಹೇಳಿದ್ದೇನು?

ಬೆಂಗಳೂರು: ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಕಡಿಮೆಯಿದೆ. ರೋಗ ಲಕ್ಷಣವಿಲ್ಲದವರ ಕ್ವಾರಂಟೈನ್​ಗೆ ವ್ಯವಸ್ಥೆ ಮಾಡಿದ್ದೇವೆ. ಹೋಟೆಲ್, ಕಲ್ಯಾಣ ಮಂಟಪಗಳಲ್ಲಿಯೂ ವ್ಯವಸ್ಥೆ ಮಾಡುತ್ತೇವೆ ಎಂದು ಸರ್ವಪಕ್ಷಗಳ ಸಭೆ ಬಳಿಕ ವಿಧಾನಸೌಧದಲ್ಲಿ ಸಚಿವ ಆರ್.ಅಶೋಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸರ್ವಪಕ್ಷಗಳ ಸಭೆಯಲ್ಲಿ ಬಹಳ ಅಮೂಲ್ಯವಾದ ಸಲಹೆಗಳನ್ನು ಶಾಸಕರು, ಸಂಸದರು ನೀಡಿದ್ದಾರೆ. ಅದನ್ನು ವಿಶೇಷ ಗಮನ ಹರಿಸಿ ಜಾರಿಗೆ ತರುತ್ತೇವೆ. ಬೇರೆ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳು ಕಡಿಮೆ ಇವೆ. ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ […]

ಸರ್ವಪಕ್ಷಗಳ ಸಭೆ ನಿರ್ಣಯ ಏನಾಯ್ತು? ಸುದ್ದಿಗೋಷ್ಠಿಯಲ್ಲಿ ಅಶೋಕ್ ಹೇಳಿದ್ದೇನು?
ಸಾಧು ಶ್ರೀನಾಥ್​
| Updated By: |

Updated on:Jun 26, 2020 | 3:34 PM

Share

ಬೆಂಗಳೂರು: ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಕಡಿಮೆಯಿದೆ. ರೋಗ ಲಕ್ಷಣವಿಲ್ಲದವರ ಕ್ವಾರಂಟೈನ್​ಗೆ ವ್ಯವಸ್ಥೆ ಮಾಡಿದ್ದೇವೆ. ಹೋಟೆಲ್, ಕಲ್ಯಾಣ ಮಂಟಪಗಳಲ್ಲಿಯೂ ವ್ಯವಸ್ಥೆ ಮಾಡುತ್ತೇವೆ ಎಂದು ಸರ್ವಪಕ್ಷಗಳ ಸಭೆ ಬಳಿಕ ವಿಧಾನಸೌಧದಲ್ಲಿ ಸಚಿವ ಆರ್.ಅಶೋಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸರ್ವಪಕ್ಷಗಳ ಸಭೆಯಲ್ಲಿ ಬಹಳ ಅಮೂಲ್ಯವಾದ ಸಲಹೆಗಳನ್ನು ಶಾಸಕರು, ಸಂಸದರು ನೀಡಿದ್ದಾರೆ. ಅದನ್ನು ವಿಶೇಷ ಗಮನ ಹರಿಸಿ ಜಾರಿಗೆ ತರುತ್ತೇವೆ. ಬೇರೆ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳು ಕಡಿಮೆ ಇವೆ. ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕರು ತಿಳಿಸಿದ್ದಾರೆ.

ಬೆಡ್​ ಅಲಾಟ್​ಮೆಂಟ್​ಗಾಗಿ ತುಷಾರ್​ ಗಿರಿನಾಥ್​ ನೇಮಕ:  ರಾಜ್ಯದಲ್ಲಿ ಈವರೆಗೆ 5.53 ಲಕ್ಷ ಜನರ ಸ್ಯಾಂಪಲ್​ ಪರೀಕ್ಷೆ ನಡೆದಿದೆ. ಬೆಂಗಳೂರಿನಲ್ಲಿ ಪ್ರತಿದಿನ 5 ಸಾವಿರ ಸ್ಯಾಂಪಲ್​ ಪರೀಕ್ಷೆ ನಡೆಯುತ್ತಿದೆ. ಬೆಡ್ ಹಂಚಿಕೆ ಸಂಬಂಧ ವಿಧಾನಸಭಾವಾರು ನೋಡಲ್ ಆಫೀಸರ್ ನೇಮಕ ಮಾಡಲಾಗುತ್ತೆ. ಬೆಡ್​ ಅಲಾಟ್​ಮೆಂಟ್​ಗಾಗಿ ಐಎಎಸ್ ಅಧಿಕಾರಿ ತುಷಾರ್​ ಗಿರಿನಾಥ್ ಅವರನ್ನು​ ನೇಮಿಸಲಾಗಿದೆ.

ರೋಗನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇಧ ಔಷಧ ಬಳಕೆಗೆ ಹಲವಾರು ಸಲಹೆ ಕೊಟ್ಟಿದ್ದಾರೆ. ಈಗಾಗಲೇ ಕೇರಳದಲ್ಲಿ ಆಯುರ್ವೇದ ಔಷಧ ಬಳಕೆ ಮಾಡಲಾಗುತ್ತಿದೆ. ಸೈಡ್ ಎಫೆಕ್ಟ್​ ಇಲ್ಲದಿರುವುದರಿಂದ ಆಯುರ್ವೇಧ ಔಷಧ ಬಳಸಬಹುದು. ಯಾವುದೇ ಶಾಸಕರು ತಮ್ಮ ಕ್ಷೇತ್ರದ ಆಸ್ಪತ್ರೆಗಳಿಗೆ ಭೇಟಿ ನೀಡಿ ಆಹಾರ ವ್ಯವಸ್ಥೆ ಬಗ್ಗೆ ಪರಿಶೀಲನೆ ಮಾಡಬಹುದು.

ಮತ್ತೆ ಲಾಕ್​ಡೌನ್ ಮಾಡಲ್ಲ: ಯಾವುದೇ ಕಾರಣಕ್ಕೂ ಮತ್ತೆ ಲಾಕ್​ಡೌನ್ ಮಾಡುವುದಿಲ್ಲ. ಕೊರೊನಾ ಜತೆ ನಮ್ಮ ಜೀವನ ನಡೆಯಬೇಕಾಗಿರುತ್ತದೆ. ಕೊರೊನಾ ಜತೆ ಅಭಿವೃದ್ಧಿ ಕಾರ್ಯಗಳೂ ನಡೆಯಬೇಕು. ಕೊರೊನಾ ಸೋಂಕಿತರನ್ನು ವೈರಿಗಳಂತೆ ನೋಡಬೇಡಿ. ಅವರು ಕೊರೊನಾ ಸೋಂಕಿತರೇ ಹೊರತು ವಿಲನ್​ಗಳಲ್ಲ. ಸೋಂಕಿತರು ಕಂಡುಬಂದ ಏರಿಯಾ ಸೀಲ್​ಡೌನ್​​ ಮಾಡುವುದಿಲ್ಲ. ಸೋಂಕಿತರ ಮನೆಗಳನ್ನು ಮಾತ್ರ ಸೀಲ್​ಡೌನ್​ ಮಾಡ್ತೇವೆ.

Published On - 3:12 pm, Fri, 26 June 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!