ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಯಾವುದೇ ಕೆಲಸಕ್ಕೆ ಬಾರದವನಾಗುತ್ತೇನೆ :ಟಿವಿ9ಗೆ ರಮೇಶ್​ ಜಾರಕಿಹೊಳಿ ಫಸ್ಟ್​ ರಿಯಾಕ್ಷನ್

ನಾನು ಅತ್ಯಂತ ಸೂಕ್ಷ್ಮ ಮನಸ್ಥಿತಿಯ ಮನುಷ್ಯ. ಸಮಗ್ರ ತನಿಖೆಯಾಗಬೇಕೆಂದು ಸಿಎಂಗೆ ಮನವಿ ಮಾಡುತ್ತೇನೆ ಎಂದು ಸಿಡಿ ಪ್ರಕರಣದ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ ಟಿವಿ9ಗೆ ಫಸ್ಟ್​ ರಿಯಾಕ್ಷನ್ ಕೊಟ್ಟಿದ್ದಾರೆ.

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಯಾವುದೇ ಕೆಲಸಕ್ಕೆ ಬಾರದವನಾಗುತ್ತೇನೆ :ಟಿವಿ9ಗೆ ರಮೇಶ್​ ಜಾರಕಿಹೊಳಿ ಫಸ್ಟ್​ ರಿಯಾಕ್ಷನ್
ರಮೇಶ್ ಜಾರಕಿಹೊಳಿ
Follow us
KUSHAL V
|

Updated on:Mar 02, 2021 | 11:22 PM

ಬೆಂಗಳೂರು: ಸಚಿವ ಸ್ಥಾನಕ್ಕೆ ಅಲ್ಲ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವೆ. ತಪ್ಪು ಸಾಬೀತಾದರೆ ರಾಜಕಾರಣದಿಂದಲೇ ನಿವೃತ್ತಿ ಹೊಂದುವೆ ಎಂದು ಟಿವಿ9ಗೆ ಸಚಿವ ರಮೇಶ್ ಜಾರಕಿಹೊಳಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಹೆಣ್ಣುಮಗಳಿಗೆ ದ್ರೋಹಮಾಡಿದ್ರೆ ಬದುಕಲು ಯೋಗ್ಯನಲ್ಲ. ದಿನೇಶ್ ಕಲ್ಲಹಳ್ಳಿ ಯಾರು ಎಂದು ನನಗೆ ಗೊತ್ತಿಲ್ಲ. ಕಳೆದ 21 ವರ್ಷದಿಂದ ನಾನು ಶಾಸಕನಾಗಿ ಆಯ್ಕೆಯಾಗುತ್ತಿದ್ದೇನೆ. ನಾನು ಅತ್ಯಂತ ಸೂಕ್ಷ್ಮ ಮನಸ್ಥಿತಿಯ ಮನುಷ್ಯ. ಸಮಗ್ರ ತನಿಖೆಯಾಗಬೇಕೆಂದು ಸಿಎಂಗೆ ಮನವಿ ಮಾಡುತ್ತೇನೆ ಎಂದು ಸಿಡಿ ಪ್ರಕರಣದ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ ಟಿವಿ9ಗೆ ಫಸ್ಟ್​ ರಿಯಾಕ್ಷನ್ ಕೊಟ್ಟಿದ್ದಾರೆ.

‘ನಾನು ಏನಾದರೂ ತಪ್ಪು ಮಾಡಿದ್ದರೆ ಗಲ್ಲಿಗೇರಿಸಲಿ’ ಯಾರು ಏನು ಎಂಬುದು ನನಗೆ ಗೊತ್ತೇ ಇಲ್ಲ. ಜಾರಕಿಹೊಳಿ ಕುಟುಂಬ ಅತ್ಯಂತ ದೊಡ್ಡ ಕುಟುಂಬ. ಸಿಎಂ ಜತೆ ನೇರವಾಗಿ ದೂರವಾಣಿ ಮೂಲಕ ಮಾತನಾಡಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಮನವಿ ಮಾಡುವೆ. ನಾನು ದೈವದ ಮೇಲೆ ನಂಬಿಕೆ ಇಟ್ಟವನು. ನಾನು ಏನಾದರೂ ತಪ್ಪು ಮಾಡಿದ್ದರೆ ಗಲ್ಲಿಗೇರಿಸಲಿ ಎಂದು ರಮೇಶ್​ ಹೇಳಿದರು.

ನಾನು ಇಂದು ಮೈಸೂರಿಗೆ ತೆರಳಿದ್ದೆ. ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿದ್ದನ್ನು ನೋಡಿ ಬೇಸರವಾಯಿತು. ಯುವತಿ ಯಾರು ಎಂಬು ನನಗೆ ಗೊತ್ತೇ ಇಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ರಾಜೀನಾಮೆ ಕೊಡುವ ಬಗ್ಗೆ ಯೋಚನೆಯೇ ಇಲ್ಲ. ನಾನು ತಪ್ಪಿತಸ್ಥನೆಂದು ದೃಢಪಟ್ಟ ನಂತರ ರಾಜೀನಾಮೆ ನೀಡುವೆ. ಸಚಿವ ಸ್ಥಾನಕ್ಕೆ ರಾಜೀನಾಮೆ ಅಲ್ಲ, ಶಾಸಕ ಸ್ಥಾನಕ್ಕೂ ರಾಜೀನಾಮೆ ಕೊಡುವೆ ಎಂದು ಹೇಳಿದರು.

‘ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಕೆಲಸಕ್ಕೆ ಬಾರದವನಾಗುತ್ತೇನೆ’ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಕೆಲಸಕ್ಕೆ ಬಾರದವನಾಗುತ್ತೇನೆ. ಯಾವುದೇ ಕೆಲಸಕ್ಕೆ ಬಾರದವನು ಎಂದು ಸಾಬೀತಾಗುತ್ತದೆ. ಮೈಸೂರಿನ ಚಾಮುಂಡಿ ಬೆಟ್ಟದಿಂದ ನೇರವಾಗಿ ಬಂದಿರುವೆ. ಬೆಂಗಳೂರಿನ ನಿವಾಸದಲ್ಲಿ ಕುಳಿತು ಮಾತನಾಡುತ್ತಿದ್ದೇನೆ ಎಂದು ಹೇಳಿದರು.

ಇದೀಗ, ರಮೇಶ್ ಜಾರಕಿಹೊಳಿ ಸಿಎಂ ಬಿಎಸ್​ವೈ  ಭೇಟಿಯಾಗಲಿದ್ದಾರೆ. ಸಿಎಂ ಭೇಟಿ ನಂತರ ಸಚಿವ ರಮೇಶ್​ ದೆಹಲಿಗೆ ತೆರಳಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಸಿಎಂ ಭೇಟಿಗೆ ಹೋಗ್ತೇನೆ, ಸಿಎಂ ಸಿಕ್ಕರೆ ಭೇಟಿಯಾಗುತ್ತೇನೆ ಎಂದು ಟಿವಿ9ಗೆ ಸಚಿವ ರಮೇಶ್ ಜಾರಕಿಹೊಳಿ ಮೊದಲ ಪ್ರತಿಕ್ರಿಯೆ ನೀಡಿದರು. ಸಿಎಂ ಸಿಗದಿದ್ದರೆ ನಾನು ನೇರವಾಗಿ ದೆಹಲಿಗೆ ಹೋಗುತ್ತೇನೆ ಎಂದು ಸಹ ಹೇಳಿದರು.

ಅತ್ತ, ರಾಜೀನಾಮೆ ನೀಡಲು ಸ್ವಪಕ್ಷೀಯರಿಂದಲೇ ಒತ್ತಡ ಬರುವ ಸಾಧ್ಯತೆಯಿದೆ. ಹಾಗಾಗಿ, ವರಿಷ್ಠರ ಬುಲಾವ್ ಮೊದಲೇ ದೆಹಲಿಗೆ ತೆರಳಲು ಸಚಿವ ರಮೇಶ್​ ಜಾರಕಿಹೊಳಿ ಚಿಂತನೆ ನಡೆಸಿದ್ದಾರೆ. ಮೊದಲೇ ದೆಹಲಿಯತ್ತ‌ ತೆರಳಲು ಸಚಿವ ರಮೇಶ್ ಚಿಂತನೆ ನಡೆಸಿದ್ದಾರೆ. ಹೀಗಾಗಿ, ರಮೇಶ್​ ನಡೆ ಇನ್ನೂ ಸ್ಪಷ್ಟ ರೂಪ ಪಡೆದಿಲ್ಲ.

‘ಸಚಿವ ರಮೇಶ್ ತನಿಖೆಗೆ ಆಗ್ರಹ ಮಾಡಿದ್ದು ಸ್ವಾಗತಾರ್ಹ’ ಸಚಿವ ರಮೇಶ್ ತನಿಖೆಗೆ ಆಗ್ರಹ ಮಾಡಿದ್ದು ಸ್ವಾಗತಾರ್ಹ ಎಂದು ಟಿವಿ9ಗೆ ದಿನೇಶ್ ಕಲ್ಲಹಳ್ಳಿ ಹೇಳಿದರು. ಸಂತ್ರಸ್ತೆ ಜೊತೆ ನಾನು ಈವರೆಗೂ ಮಾತನಾಡಿಲ್ಲ. ಪರಸ್ಪರ ಒಮ್ಮತದಿಂದ ನಡೆದಿದ್ರೂ ಇದು ಅನ್ಯಾಯ. ರಮೇಶ್ ಜಾರಕಿಹೊಳಿ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ ಎಂದು ದಿನೇಶ್ ಕಲ್ಲಹಳ್ಳಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ‘ಸಿಡಿ’ದ ರಾಸಲೀಲೆ ಕರ್ಮಕಾಂಡ: ರಮೇಶ್ ಜಾರಕಿಹೊಳಿ ಹಸಿಬಿಸಿ ದೃಶ್ಯ ರಿಲೀಸ್​

ಇದನ್ನೂ ಓದಿ: ಇಂಥ ಕೆಲಸಕ್ಕೆ ಕರ್ನಾಟಕ ಭವನವನ್ನು ಬಳಸಿಕೊಂಡಿದ್ದು ತಪ್ಪು: ಶಾಸಕ ಯತೀಂದ್ರ ಸಿದ್ದರಾಮಯ್ಯ ಗರಂ

Published On - 9:38 pm, Tue, 2 March 21

ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು