ಮೈಸೂರು: ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ಅಟ್ಟಹಾಸ ಮೆರೆಯುತ್ತಿರುವ ಸಂದರ್ಭದಲ್ಲಿ ಸಮಾಧಾನಕರ ಸಂಗತಿಯೆಂದರೆ ಮೈಸೂರು ಇದೀಗ ಗ್ರೀನ್ ಜೋನ್ಗೆ ಬಂದಿದೆ. ಹೌದು, ಜಿಲ್ಲೆಯಲ್ಲಿದ್ದ ಎಲ್ಲಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕೊರೊನಾದಿಂದ ಮುಕ್ತವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ S.T.ಸೋಮಶೇಖರ್ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ನಾಡದೇವತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಆದಷ್ಟು ಬೇಗ ಕೊರೊನಾ ಸಂಕಷ್ಟದಿಂದ ನಿವಾರಿಸುವಂತೆ ದೇವಸ್ಥಾನದ ಹೊರಭಾಗದಲ್ಲೇ ನಿಂತು ಸೋಮಶೇಖರ್ ಪ್ರಾರ್ಥಿಸಿದ್ದಾರೆ.
ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಜಿ.ಟಿ.ದೇವೇಗೌಡ, ಶಾಸಕ ರಾಮದಾಸ್ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ.
Published On - 10:38 am, Sat, 16 May 20