ಶಿವಾಜಿನಗರದದಲ್ಲಿ ತಲೆಯೆತ್ತಿದೆ ಸುಸಜ್ಜಿತ ಕೋವಿಡ್ ಆಸ್ಪತ್ರೆ, ಯಾವುದದು?
ಬೆಂಗಳೂರು:ನಗರದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಸೋಂಕಿತರ ಸಂಖ್ಯೆ ಹೆಚ್ಚಾದಂತೆ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ ಸಿಗದೇ ಸೋಂಕಿತರು ನರಳುವುದು ಹೆಚ್ಚಾಗುತ್ತಿದ್ದು, ಇದನ್ನು ಸರಿದೂಗಿಸಲು ಸರ್ಕಾರ ನಾನಾ ಕಾರ್ಯಕ್ರಮಗಳನ್ನು ಕೈಗೊಂಡಿದೆ. ಅದರ ಫಲವಾಗಿ ಶಿವಾಜಿನಗರದ ಬ್ರಾಡ್ ವೇ ಆಸ್ಪತ್ರೆಯನ್ನು ಕೋವಿಡ್-19 ಸೋಂಕಿತರ ಚಿಕಿತ್ಸೆಗಾಗಿ ಸಜ್ಜುಗೊಳಿಸಲಾಗುತ್ತಿದೆ. ಹೀಗಾಗಿ ಇಂದು ಪೂರ್ವವಲಯದ ಕೋವಿಡ್-19 ಸೋಂಕು ನಿಯಂತ್ರಣ ಉಸ್ತುವಾರಿ ಸಚಿವ ವಿ ಸೋಮಣ್ಣ, ಬ್ರಾಡ್ ವೇ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ […]
ಬೆಂಗಳೂರು:ನಗರದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಸೋಂಕಿತರ ಸಂಖ್ಯೆ ಹೆಚ್ಚಾದಂತೆ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ ಸಿಗದೇ ಸೋಂಕಿತರು ನರಳುವುದು ಹೆಚ್ಚಾಗುತ್ತಿದ್ದು, ಇದನ್ನು ಸರಿದೂಗಿಸಲು ಸರ್ಕಾರ ನಾನಾ ಕಾರ್ಯಕ್ರಮಗಳನ್ನು ಕೈಗೊಂಡಿದೆ.
ಅದರ ಫಲವಾಗಿ ಶಿವಾಜಿನಗರದ ಬ್ರಾಡ್ ವೇ ಆಸ್ಪತ್ರೆಯನ್ನು ಕೋವಿಡ್-19 ಸೋಂಕಿತರ ಚಿಕಿತ್ಸೆಗಾಗಿ ಸಜ್ಜುಗೊಳಿಸಲಾಗುತ್ತಿದೆ. ಹೀಗಾಗಿ ಇಂದು ಪೂರ್ವವಲಯದ ಕೋವಿಡ್-19 ಸೋಂಕು ನಿಯಂತ್ರಣ ಉಸ್ತುವಾರಿ ಸಚಿವ ವಿ ಸೋಮಣ್ಣ, ಬ್ರಾಡ್ ವೇ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಕೈಗೊಂಡ ಸಿದ್ಧತಾ ಕ್ರಮಗಳ ಪರಿಶೀಲನೆ ನಡೆಸಿದರು.