ಗೆಳೆತನದ ಸೋಗಿನಲ್ಲಿ.. ಮಾವನ ಮನೆಗೆ ಬಂದಿದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರ

ಮಾವನ ಮನೆಗೆ ಬಂದಿದ್ದ ಅಪ್ರಾಪ್ತೆಯ ಮೇಲೆ ದುರುಳನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • TV9 Web Team
  • Published On - 22:25 PM, 18 Jan 2021
ತ್ಯಾಮಗೊಂಡ್ಲು ಪೊಲೀಸ್ ಠಾಣೆ

ನೆಲಮಂಗಲ: ಮಾವನ ಮನೆಗೆ ಬಂದಿದ್ದ ಅಪ್ರಾಪ್ತೆಯ ಮೇಲೆ ದುರುಳನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಪ್ರಾಪ್ತೆ ಮೇಲೆ 21 ವರ್ಷದ ಯುವಕನಿಂದ ಅತ್ಯಾಚಾರ ಎಸಗಲಾಗಿದೆ. ಗೆಳೆತನದ ಸೋಗಿನಲ್ಲಿ ಅಪ್ರಾಪ್ತೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಿರಾತಕ ಕೃತ್ಯ ಎಸಗಿದ್ದಾನೆ.

ಸದ್ಯ, ಪೋಕ್ಸೊ ಕಾಯ್ದೆಯಡಿ ಕೇಸ್ ದಾಖಲಿಸಿ ಆರೋಪಿ ಬಂಧನವಾಗಿದೆ. ಬೆಂಗಳೂರಿನ ದೀಪಾಂಜಲಿನಗರದ ನಿವಾಸಿಯಾದ ಸೋಮಶೇಖರ್ ಬಂಧಿತ ಆರೋಪಿ. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕಕ್ಕೆ ಕರಾಳ ದಿನ: ರಾಜ್ಯದ ಹಲವೆಡೆ ಇಂದು ಭೀಕರ ಅಪಘಾತ