
ಚಿಕ್ಕಮಗಳೂರು: ದೇಗುಲಕ್ಕೆ ಹೋಗಿದ್ದ ವೃದ್ಧೆಯನ್ನು ಹತ್ಯೆಗೈದು ಚಿನ್ನದ ಸರ ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಅಜ್ಜಂಪುರದ ಶಿವಾನಂದಾಶ್ರಮದ ಬಳಿ ನಡೆದಿದೆ. ನಾಗರತ್ನ (70) ಮೃತ ವೃದ್ಧೆ.
ಕೆಲ ದುಷ್ಕರ್ಮಿಗಳು ದೇವಾಲಯಕ್ಕೆ ಹೋಗಿದ್ದ ಮೃದ್ಧೆಯನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿ ವೃದ್ಧೆ ಬಳಿಯಿಂದ ಸರ ಕಸಿದು ಪರಾರಿಯಾಗಿದ್ದಾರೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಅಡಿಷನಲ್ ಎಸ್ಪಿ ಶೃತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚೂರು ಕರುಣೆಯಿಲ್ಲದೆ ಕೊಲೆ ಮಾಡಿ ಸರ ಕದ್ದ ಕಳ್ಳರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.