ರಾಮನಗರ: ಜಮೀನು ವಿವಾದ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ವ್ಯಕ್ತಿಯನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿ, ಆ ಪ್ಲ್ಯಾನ್ ಫ್ಲಾಪ್ ಆಗಿ ದುಷ್ಕರ್ಮಿಗಳು ವಾಪಸಾಗಿರುವ ಘಟನೆ ರಾಮನಗರದ ಮಲ್ಲೇಶ್ವರ ಬಡಾವಣೆಯಲ್ಲಿ ನಡೆದಿದೆ.
ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯ ಪುತ್ರ, ಕ.ರ.ವೇ. ತಾಲೂಕು ಅಧ್ಯಕ್ಷಮ ಹತ್ಯೆ ಯತ್ನ
ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ರಾಮನಗರ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯ ಮಗನಾಗಿರುವ ಕ.ರ.ವೇ. ತಾಲೂಕು ಘಟಕದ ಅಧ್ಯಕ್ಷ ದೇವರಾಜ್ನನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿಕೊಳ್ಳಲಾಗಿತ್ತು. ಆದರೆ ದುಷ್ಕರ್ಮಿಗಳು ಬಂದಿದ್ದ ಕಾರು ಹಳ್ಳಕ್ಕೆ ಬಿದ್ದಿತ್ತು.
ಕಾರು ಹಳ್ಳಕ್ಕೆ ಬೀಳುತ್ತಿದ್ದಂತೆ ಜನರು ಸೇರಿದ್ದಾರೆ. ತಕ್ಷಣವೇ ಕಾರಿನಲ್ಲಿದ್ದ ನಾಲ್ವರು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕಾರಲ್ಲಿ ಲಾಂಗ್, ಖಾರದಪುಡಿ ಪತ್ತೆಯಾಗಿದೆ. ಸ್ಥಳಕ್ಕೆ ಐಜೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.