ಫ್ರೆಂಡ್ಸ್ ಜೊತೆ ಎಣ್ಣೆ ಪಾರ್ಟಿ ಮಾಡಿ ಮನೆಗೆ ಹೋಗುತ್ತಿದ್ದವ ನಡು ರಸ್ತೆಯಲ್ಲಿ ಭೀಕರವಾಗಿ ಕೊಲೆಯಾದ..

ವೀಕ್ ಆಫ್ ಹಿನ್ನೆಲೆ ಫ್ರೆಂಡ್ಸ್ ಜೊತೆ ಎಣ್ಣೆ ಪಾರ್ಟಿ ಮಾಡಿ ಮನೆಗೆ ಹೋಗುತ್ತಿದ್ದವನನ್ನು ದುಷ್ಕರ್ಮಿಗಳು ಅಟ್ಯಾಕ್ ಮಾಡಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಆರ್.ಟಿ. ನಗರದಲ್ಲಿ ನಡೆದಿದೆ.

  • TV9 Web Team
  • Published On - 6:53 AM, 18 Dec 2020
ಫ್ರೆಂಡ್ಸ್ ಜೊತೆ ಎಣ್ಣೆ ಪಾರ್ಟಿ ಮಾಡಿ ಮನೆಗೆ ಹೋಗುತ್ತಿದ್ದವ ನಡು ರಸ್ತೆಯಲ್ಲಿ ಭೀಕರವಾಗಿ ಕೊಲೆಯಾದ..
ಲೋಕೇಶ್ ಕೊಲೆಯಾದ ಯುವಕ

ಬೆಂಗಳೂರು: ಕೆಲಸಕ್ಕೆ ರಜೆಯಿದ್ದ ಹಿನ್ನೆಲೆಯಲ್ಲಿ ಎಣ್ಣೆ ಪಾರ್ಟಿ ಮಾಡಿ ಮನೆಗೆ ತೆರಳುತ್ತಿದ್ದವನ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಆರ್.ಟಿ. ನಗರದಲ್ಲಿ ನಡೆದಿದೆ. ಆರ್ ಟಿ ನಗರದ ನಿವಾಸಿ ಲೋಕೇಶ್ ಕೊಲೆಯಾದ ಯುವಕ.

ವೃತ್ತಿಯಲ್ಲಿ ಕಾಲ್ ಸೆಂಟರ್ ಉದ್ಯೋಗಿಯಾಗಿದ್ದ ಲೋಕೇಶ್​ಗೆ ನಿನ್ನೆ ವೀಕ್ ಆಫ್ ಇತ್ತು. ಈ ಹಿನ್ನೆಲೆ ತನ್ನ ಗೆಳೆಯರೊಂದಿಗೆ ಬಾರ್​ನಲ್ಲಿ ಎಣ್ಣೆ ಮಾರ್ಟಿ ಮಾಡಿದ್ದ. ಬಳಿಕ ಬೈಕ್​ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಪೆಟ್ರೋಲ್ ಖಾಲಿಯಾದ ಕಾರಣ, ಪೆಟ್ರೋಲ್ ಹಾಕಿಸಿಕೊಂಡು ಮನೆಗೆ ತೆರಳುತ್ತಿದ್ದ. ಆಗ ಮಾರ್ಗ ಮಧ್ಯೆ ಐದಾರು ಜನ ದುಷ್ಕರ್ಮಿಗಳು ಆತನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಅಟ್ಯಾಕ್ ಮಾಡಿದ್ದಾರೆ. ಅಟ್ಯಾಕ್ ಮಾಡಿದ ಕೂಡಲೇ ಅಲ್ಲಿಂದ ಎಸ್ಕೇಪ್ ಆಗಲು ಲೋಕೇಶ್ ಸುಮಾರು ನೂರು ಮೀಟರ್​ನಷ್ಟು ಓಡಿ ಹೋಗಿದ್ದಾನೆ.

ಬಳಿಕ ಅಷ್ಟರಲ್ಲೇ ತೀವ್ರ ರಕ್ತಸ್ರಾವದಿಂದ ಕುಸಿದುಬಿದ್ದಿದ್ದ. ಆತನನ್ನು ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಘಟನೆ ಬಳಿಕ ಆರ್.ಟಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಲೋಕೇಶ್ ಪಾರ್ಟಿ ಮಾಡಿದ್ದ ಬಾರ್​ನಲ್ಲಿಯೇ ಏನೋ ಕಿರಿಕ್ ಆದ ಕಾರಣ ಕೃತ್ಯ ನಡೆದಿರುವ ಶಂಕೆಯಿದ್ದು, ಈ ಬಗ್ಗೆ ಆರ್​.ಟಿ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ: ಸ್ನೇಹಿತನ ನೆರವಿನಿಂದ ಗಂಡನ ಕೊಲೆ