ಸಮೋಸ ಖರೀದಿಗೆ ಬಂದವರಿಂದ ಹೋಟೆಲ್​ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಯಾವೂರಲ್ಲಿ?

ಮಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಗರದ ಫಳ್ನೀರ್​ ಬಳಿಯ MFC ಹೋಟೆಲ್​ನಲ್ಲಿ ನಡೆದಿದೆ. ಹೋಟೆಲ್​ನಲ್ಲಿ ಸಮೋಸ ಖರೀದಿಗೆ ಬಂದಿದ್ದ ಅಪರಿಚಿತರು ಸಿಬ್ಬಂದಿ ಜೊತೆ ಮಾತಿನ ಚಕಮಕಿ ನಡೆಸಿದರು. ಬಳಿಕ, ಹೋಟೆಲ್​ನ ಇಬ್ಬರ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ಸಹ ನಡೆಸಿದ್ದಾರೆ. ಈ ನಡುವೆ, ಹೋಟೆಲ್​ನ ಗಾಜು ಮತ್ತು ಪೀಠೋಪಕರಣ ಧ್ವಂಸಮಾಡಿದ ಕಿಡಿಗೇಡಿಗಳನ್ನು ಹಿಡಿಯಲು ಯತ್ನಿಸಿದ ಸಿಬ್ಬಂದಿ ಮೇಲೆ 2 ಸುತ್ತು ಗುಂಡುಹಾರಿಸಿ ನಾಲ್ವರು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹೋಟೆಲ್​ನ ಓರ್ವ ಸಿಬ್ಬಂದಿಗೆ […]

ಸಮೋಸ ಖರೀದಿಗೆ ಬಂದವರಿಂದ ಹೋಟೆಲ್​ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಯಾವೂರಲ್ಲಿ?
Follow us
KUSHAL V
|

Updated on: Oct 30, 2020 | 7:36 PM

ಮಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಗರದ ಫಳ್ನೀರ್​ ಬಳಿಯ MFC ಹೋಟೆಲ್​ನಲ್ಲಿ ನಡೆದಿದೆ. ಹೋಟೆಲ್​ನಲ್ಲಿ ಸಮೋಸ ಖರೀದಿಗೆ ಬಂದಿದ್ದ ಅಪರಿಚಿತರು ಸಿಬ್ಬಂದಿ ಜೊತೆ ಮಾತಿನ ಚಕಮಕಿ ನಡೆಸಿದರು. ಬಳಿಕ, ಹೋಟೆಲ್​ನ ಇಬ್ಬರ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ಸಹ ನಡೆಸಿದ್ದಾರೆ.

ಈ ನಡುವೆ, ಹೋಟೆಲ್​ನ ಗಾಜು ಮತ್ತು ಪೀಠೋಪಕರಣ ಧ್ವಂಸಮಾಡಿದ ಕಿಡಿಗೇಡಿಗಳನ್ನು ಹಿಡಿಯಲು ಯತ್ನಿಸಿದ ಸಿಬ್ಬಂದಿ ಮೇಲೆ 2 ಸುತ್ತು ಗುಂಡುಹಾರಿಸಿ ನಾಲ್ವರು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹೋಟೆಲ್​ನ ಓರ್ವ ಸಿಬ್ಬಂದಿಗೆ ಗುಂಡೇಟು ತಗುಲಿ ಗಾಯಗಳಾಗಿದೆ.

ಸದ್ಯ, ಪರಾರಿಯಾಗ್ತಿದ್ದ ನಾಲ್ವರ ಪೈಕಿ ಇಬ್ಬರನ್ನು ಸ್ಥಳೀಯರು ಹಿಡಿದಿದ್ದಾರೆ. ಮತ್ತಿಬ್ಬರು ದುಷ್ಕರ್ಮಿಗಳು ಆಟೋ ರಿಕ್ಷಾದಲ್ಲಿ ಪರಾರಿಯಾಗಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಉದ್ದೇಶಪೂರ್ವಕವಾಗಿ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಮಂಗಳೂರಿನ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ