10 ವರ್ಷದಿಂದ ನವೀನ್​ನನ್ನು ನಾವು ಹತ್ತಿರಕ್ಕೇ ಸೇರಿಸಿಲ್ಲ: ಶಾಸಕ ಅಖಂಡ ಶ್ರೀನಿವಾಸಮೂರ್ತಿ

ಬೆಂಗಳೂರು: ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟಿವಿ9 ಜೊತೆ ಮಾತನಾಡಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ನಮ್ಮ ಮನೆಯಲ್ಲಿದ್ದ ಹಲವು ವಸ್ತುಗಳನ್ನು ದೋಚಿದ್ದಾರೆ. ಕೆಲವು ವಸ್ತುಗಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾರೆ. ಪೆಟ್ರೋಲ್ ಬಾಂಬ್​, ಲಾಂಗು, ಮಚ್ಚು ತಂದು ದಾಳಿ ಮಾಡಿದ್ದಾರೆ ಎಂದು ಪುಲಿಕೇಶಿನಗರ ಶಾಸಕ ತಮ್ಮ ನೋವು ತೋಡಿಕೊಂಡಿದ್ದಾರೆ. ಕಳೆದ 50 ವರ್ಷಗಳಿಂದ ನಾವು ಆ […]

10 ವರ್ಷದಿಂದ ನವೀನ್​ನನ್ನು ನಾವು ಹತ್ತಿರಕ್ಕೇ ಸೇರಿಸಿಲ್ಲ: ಶಾಸಕ ಅಖಂಡ ಶ್ರೀನಿವಾಸಮೂರ್ತಿ
Follow us
Guru
| Updated By: ಸಾಧು ಶ್ರೀನಾಥ್​

Updated on:Aug 12, 2020 | 6:20 PM

ಬೆಂಗಳೂರು: ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟಿವಿ9 ಜೊತೆ ಮಾತನಾಡಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ನಮ್ಮ ಮನೆಯಲ್ಲಿದ್ದ ಹಲವು ವಸ್ತುಗಳನ್ನು ದೋಚಿದ್ದಾರೆ. ಕೆಲವು ವಸ್ತುಗಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾರೆ. ಪೆಟ್ರೋಲ್ ಬಾಂಬ್​, ಲಾಂಗು, ಮಚ್ಚು ತಂದು ದಾಳಿ ಮಾಡಿದ್ದಾರೆ ಎಂದು ಪುಲಿಕೇಶಿನಗರ ಶಾಸಕ ತಮ್ಮ ನೋವು ತೋಡಿಕೊಂಡಿದ್ದಾರೆ.

ಕಳೆದ 50 ವರ್ಷಗಳಿಂದ ನಾವು ಆ ಮನೆಯಲ್ಲಿ ಇದ್ದೆವು. 50 ವರ್ಷದ ಇತಿಹಾಸದ ಮನೆಯಲ್ಲಿ ನಡೆದ ಈ ಘಟನೆಯಿಂದ ನನಗೆ ಭಾರೀ ದುಃಖವಾಗಿದೆ. ಕಳೆದ10 ವರ್ಷಗಳಿಂದ ನವೀನ್​ಗೂ ನಮಗೂ ಸಂಬಂಧವಿಲ್ಲ. 10 ವರ್ಷಗಳಿಂದ ನವೀನ್​ನನ್ನು ನಾವು ಹತ್ತಿರಕ್ಕೆ ಸೇರಿಸುತ್ತಿರಲಿಲ್ಲ ಎಂದು ಆರೋಪಿ ನವೀನ್‌ ಬಗ್ಗೆ ಅಖಂಡ ಅಸಮಾಧಾನ ಹೊರಹಾಕಿದ್ದಾರೆ.

ಪ್ರಮುಖ ಆರೋಪಿ ಮುಜಾಮಿಲ್​ನನ್ನು ನಾನು ನೋಡಿಲ್ಲ. ಘಟನೆಯಿಂದ ನಾನು ನೊಂದಿದ್ದೇನೆ. ನಮಗೂ ಮತ್ತು ನಮ್ಮ ಕುಟುಂಬಕ್ಕೆ ರಕ್ಷಣೆ ಕೊಡಬೇಕು. ಈ ಸಂಬಂಧ ನಾನು ಸಿಎಂ ಯಡಿಯೂರಪ್ಪಗೆ ಮನವಿ ಮಾಡಿದ್ದೇನೆ. ನನಗೆ ಆಗಿರುವಂತೆ ಬೇರೆ ಯಾವ ಶಾಸಕರಿಗೂ ಆಗಬಾರದು. ರಾಜ್ಯದ ಎಲ್ಲ ಶಾಸಕರಿಗೂ ರಕ್ಷಣೆ ಕೊಡಲು ಮನವಿ ಮಾಡುತ್ತೇನೆ ಎಂದು ಶ್ರೀನಿವಾಸ ಮೂರ್ತಿ ಹೇಳಿದ್ದಾರೆ.

ಈ ಗಲಾಟೆ ತಣ್ಣಗಾದ ಬಳಿಕ ಎಲ್ಲ ಧರ್ಮಗಳು ಪ್ರಮುಖ ಗುರುಗಳನ್ನು ಕರೆಸಿ ಶಾಂತಿ ಸಭೆ ಮಾಡುತ್ತೇವೆ. ಸಮಾಜದಲ್ಲಿ ಶಾಂತಿ ನೆಲೆಸಬೇಕು. ಈ ರೀತಿಯ ಘಟನೆಗಳು ನಡೆಯಬಾರದು. ಇದರಿಂದ ಸಮಾಜನದ ಸ್ವಾಸ್ಥ್ಯ ಕೆಡುತ್ತದೆ ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ತಿಳಿಸಿದ್ದಾರೆ.

Published On - 6:20 pm, Wed, 12 August 20

ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ