ನನ್ನ ಕ್ಷೇತ್ರದ ಜನ ತುಂಬಾ ಕಷ್ಟದಲ್ಲಿದ್ದಾರೆ: ಶಾಸಕ ಅಖಂಡ ಶ್ರೀನಿವಾಸಮೂರ್ತಿ

ತಮ್ಮ ಮನೆಗೆ ಬೆಂಕಿ ಹಚ್ಚಿದ ಪ್ರಕರಣ ಹಾಗೂ ನಗರದ ಎರಡು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಹಿಂಸಾಚಾರ, ದೊಂಬಿಗಳಗೆ ಸಂಬಂಧಿಸಿದಂತೆ ಪುಲಿಕೇಶಿನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸಿಸಿಬಿ ಅಧಿಕಾರಿಗಳೆದುರು ವಿಚಾರಣೆಗೆ ಹಾಜರಾದರು. ವಿಚಾರಣೆ ನಂತರ ಸುದ್ದಿಗಾರರೊಂದಿಗೆ ಮಾತಾಡಿದ ಮೂರ್ತಿ, ‘‘ಗಲಭೆಗೆ ಸಂಬಂಧಿಸಿದಂತೆ ನನ್ನ ಹೇಳಿಕೆಯನ್ನು ದಾಖಲಿಸಿದ್ದೇನೆ. ನನಗೆ ಯಾರ ಮೇಲೂ ಅನುಮಾನವಿಲ್ಲ. ಆದರೆ ಸ್ಥಳೀಯ ಕಾರ್ಪೊರೇಟರ್ ಸೇರಿದಂತೆ ಎಲ್ಲಾ ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ತನಿಖೆ ನಡೆಯಲಿ,’’ ಎಂದರು. ‘‘ಯಾವ ಕಾರಣಕ್ಕೂ ನಿರಪರಾಧಿಗಳಿಗೆ ಶಿಕ್ಷೆ ಆಗಬಾರದು, ಹಾಗಂತ […]

ನನ್ನ ಕ್ಷೇತ್ರದ ಜನ ತುಂಬಾ ಕಷ್ಟದಲ್ಲಿದ್ದಾರೆ: ಶಾಸಕ ಅಖಂಡ ಶ್ರೀನಿವಾಸಮೂರ್ತಿ
Arun Belly

|

Aug 19, 2020 | 6:06 PM

ತಮ್ಮ ಮನೆಗೆ ಬೆಂಕಿ ಹಚ್ಚಿದ ಪ್ರಕರಣ ಹಾಗೂ ನಗರದ ಎರಡು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಹಿಂಸಾಚಾರ, ದೊಂಬಿಗಳಗೆ ಸಂಬಂಧಿಸಿದಂತೆ ಪುಲಿಕೇಶಿನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸಿಸಿಬಿ ಅಧಿಕಾರಿಗಳೆದುರು ವಿಚಾರಣೆಗೆ ಹಾಜರಾದರು.

ವಿಚಾರಣೆ ನಂತರ ಸುದ್ದಿಗಾರರೊಂದಿಗೆ ಮಾತಾಡಿದ ಮೂರ್ತಿ, ‘‘ಗಲಭೆಗೆ ಸಂಬಂಧಿಸಿದಂತೆ ನನ್ನ ಹೇಳಿಕೆಯನ್ನು ದಾಖಲಿಸಿದ್ದೇನೆ. ನನಗೆ ಯಾರ ಮೇಲೂ ಅನುಮಾನವಿಲ್ಲ. ಆದರೆ ಸ್ಥಳೀಯ ಕಾರ್ಪೊರೇಟರ್ ಸೇರಿದಂತೆ ಎಲ್ಲಾ ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ತನಿಖೆ ನಡೆಯಲಿ,’’ ಎಂದರು.

‘‘ಯಾವ ಕಾರಣಕ್ಕೂ ನಿರಪರಾಧಿಗಳಿಗೆ ಶಿಕ್ಷೆ ಆಗಬಾರದು, ಹಾಗಂತ ಕಮೀಷನರ್ ಅವರಿಗೆ ಮನವಿ ಮಾಡಿದ್ದೇನೆ. ನನ್ನ ಕ್ಷೇತ್ರದಲ್ಲಿ ದಿನಗೂಲಿ ಮಾಡಿ ಜೀವನ ನಡೆಸುವವರು, ಹಾಲುಹಣ್ಣುತರಕಾರಿ ಮಾರಿ ಹೊಟ್ಟೆ ತುಂಬಿಸಿಕೊಳ್ಳುವವರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಓಡಾಡಲು ಅನುಕೂಲ ಮಾಡಿಕೊಡುವಂತೆ ಡಿಸಿಪಿ ಅವರಿಗೆ ಮನವಿ ಮಾಡಿದ್ದೇನೆ,’’ ಎಂದು ಶಾಸಕ ಮೂರ್ತಿ ಹೇಳಿದರು.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada