AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ BSYಗೆ ಆಯಾಸ, ದಣಿವು ಆಗಿದೆ.. ಅವರು ರಾಜಕೀಯ ನಿವೃತ್ತಿ ಪಡೆಯೋದು ಒಳ್ಳೇದು -ಯತ್ನಾಳ್​ ಟಾಂಗ್​

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯುವುದು ಒಳ್ಳೇದು ಎಂದು ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಸಿಎಂ BSYಗೆ ಆಯಾಸ, ದಣಿವು ಆಗಿದೆ.. ಅವರು ರಾಜಕೀಯ ನಿವೃತ್ತಿ ಪಡೆಯೋದು ಒಳ್ಳೇದು -ಯತ್ನಾಳ್​ ಟಾಂಗ್​
ಬಸನಗೌಡ ಪಾಟೀಲ್​ ಯತ್ನಾಳ್​ (ಎಡ); ಬಿ.ಎಸ್​.ಯಡಿಯೂರಪ್ಪ (ಬಲ)
KUSHAL V
|

Updated on: Feb 05, 2021 | 11:18 PM

Share

ಚಿತ್ರದುರ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯುವುದು ಒಳ್ಳೇದು ಎಂದು ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಪಂಚಮಸಾಲಿಗರಿಗೆ ಮೀಸಲಾತಿ ಬಗ್ಗೆ ಸಿಎಂ ನೀಡಿದ ಗೊಂದಲದ ಹೇಳಿಕೆ ಹಿನ್ನೆಲೆಯಲ್ಲಿ ಯತ್ನಾಳ್​ ಆಕ್ರೋಶ ಹೊರಹಾಕಿದ್ದಾರೆ. ವಯಸ್ಸಿನ ಕಾರಣ ಸಿಎಂ ಬಿಎಸ್​ವೈ ಗೊಂದಲದ ಹೇಳಿಕೆ ಕೊಟ್ಟಿದ್ದಾರೆ. ಸಿಎಂ ಗೊಂದಲದಿಂದ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ. ಸಿಎಂ ಬೆಳಗ್ಗೆ ಒಂದು ಸಂಜೆ ಒಂದು ಹೇಳಿಕೆ ನೀಡುತ್ತಾರೆ. ಸಿಎಂ ಯಡಿಯೂರಪ್ಪಗೆ ಆಯಾಸ, ದಣಿವು ಆಗಿದೆ ಎಂದು ಯತ್ನಾಳ್​ ಹೇಳಿದರು.

‘BSY ಕುಟುಂಬದಿಂದ ಕರ್ನಾಟಕ ಮುಕ್ತ ಆಗಬೇಕು’ ಬೆಳಗ್ಗೆಯೇ ಈ ಆದೇಶ ನೀಡಿದ್ರೆ ಆಕ್ರೋಶ ಭುಗಿಲೇಳ್ತಿರಲಿಲ್ಲ. ಸಿಎಂ ಬಿಎಸ್​ವೈ ಬದಲು ಕುಟುಂಬದವರಿಂದ ಆಡಳಿತ ನಡೆಸಲಾಗುತ್ತಿದೆ. ವಿಜಯೇಂದ್ರ ಮತ್ತು ಕುಟುಂಬ ಸರ್ಕಾರ ನಡೆಸುತ್ತಿದೆ. ಪ್ರಧಾನಿಗೆ ಕುಟುಂಬ ರಾಜಕಾರಣ ಮುಕ್ತ ಕನಸಿದೆ. BSY ಕುಟುಂಬದಿಂದ ಕರ್ನಾಟಕ ಮುಕ್ತ ಆಗಬೇಕು ಎಂದು ಶಾಶಕರು ಹೇಳಿದರು.

ಹೈಕಮಾಂಡ್ ಗೌರವಯುತ ಬೇಡಿಕೆಗೆ ಸಜ್ಜಾಗಿದೆ. BSY​​​ ಉಳಿಯಬೇಕು, ಕುಟುಂಬ ಉದ್ಧಾರ ಮಾಡಬೇಕು. BSY ತಮ್ಮ ಕುಟುಂಬವನ್ನು ಉದ್ಧಾರ ಮಾಡಬೇಕೆಂದುಕೊಂಡಿದ್ದಾರೆ. ವಿಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದು ಹೇಳಿದರು.

ಡಿ.ಕೆ.ಶಿವಕುಮಾರ್​ ಸದನಕ್ಕೆ ಬರಲಿಲ್ಲ. ಸಿದ್ದರಾಮಯ್ಯ ಬೇಕು ಬೇಡ ಮಾತಾಡಿದರು ಎಂದು ಯತ್ನಾಳ್​ ಹೇಳಿದರು. ಫೆ.10ರಂದು ಸಮುದಾಯದ ಶಾಸಕರು ಮುಖಂಡರ ಸಭೆ ನಡೆಸುತ್ತೇವೆ. ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಮಾಡಿ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದು ಶಾಸಕ ಯತ್ನಾಳ್​ ಹೇಳಿದರು.

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ: ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಸಿಎಂ BSY ಸೂಚನೆ

Follow Us
KUSHAL V
KUSHAL V
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ