
ಶಿವಮೊಗ್ಗ: ನಗರದಲ್ಲಿ ಇಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ವಿವಾಹ ನಿಶ್ಚಿತಾರ್ಥ ಸಮಾರಂಭ ನೆರವೇರಿತು.
ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿಯಾದ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಡಾ. ಹಿತಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡರು. ಡಾ ಹಿತಾ ಜಿಲ್ಲೆಯ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಸಹೋದರ ಶಿವಕುಮಾರ್ರ ಪುತ್ರಿ.
ನಗರದ ಸವಳಂಗ ರಸ್ತೆಯ ಸರ್ಜಿ ಕನ್ವೆಂಷನ್ ಹಾಲ್ನಲ್ಲಿ ಸಮಾರಂಭ ನಡೆಯಿತು. ಕೊರೊನಾ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡು ನಿಶ್ಚಿತಾರ್ಥ ಸಮಾರಂಭ ನೆರವೇರಿಸಲಾಯಿತು. ಸಮಾರಂಭಕ್ಕೆ ಸಚಿವ ಕೆ.ಎಸ್ ಈಶ್ವರಪ್ಪ ಸೇರಿದಂತೆ ಹಲವು ಗಣ್ಯರು ಆಗಮಿಸಿ ವಧು ವರರಿಗೆ ಶುಭ ಹಾರೈಸಿದರು.
Published On - 4:45 pm, Mon, 17 August 20