ಕೆಲವು ಹಿತೈಷಿಗಳು, ಮಠಾಧೀಶರು ‘ತಡೀಪಾ’ ಅಂದಿದ್ದಕ್ಕೆ ರಾಜೀನಾಮೆ ನೀಡಿಲ್ಲ: ಶಾಸಕ ರಮೇಶ್ ಜಾರಕಿಹೊಳಿ

Karnataka Politics: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರದಲ್ಲಿ ರಾಜಕಾರಣ ಇಲ್ಲ. ವೈಯಕ್ತಿಕವಾಗಿ ಬೇರೆ ವಿಚಾರ ಇತ್ತು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡೋದು ಬೇಡ ಎಂದಿದ್ದಕ್ಕೆ ತಡೆ ಹಿಡಿದಿದ್ದೇನೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾತನಾಡುತ್ತೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕೆಲವು ಹಿತೈಷಿಗಳು, ಮಠಾಧೀಶರು ‘ತಡೀಪಾ’ ಅಂದಿದ್ದಕ್ಕೆ ರಾಜೀನಾಮೆ ನೀಡಿಲ್ಲ: ಶಾಸಕ ರಮೇಶ್ ಜಾರಕಿಹೊಳಿ
ರಮೇಶ್​ ಜಾರಕಿಹೊಳಿ

ಬೆಳಗಾವಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಈಗ ಮುಗಿದ ಅಧ್ಯಾಯ ಎಂದು ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಶಾಸಕ ರಮೇಶ್ ಜಾರಕಿಹೊಳಿ‌ ಸ್ಪಷ್ಟಪಡಿಸಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ನಿಶ್ಚಯಿಸಿದ್ದು ನಿಜ. ಆದರೆ ಕೆಲವು ಹಿತೈಷಿಗಳು, ಮಠಾಧೀಶರು ತಡೀಪಾ ಅಂದಿದ್ದಕ್ಕೆ ತಡೆದಿದ್ದೇನೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರದಲ್ಲಿ ರಾಜಕಾರಣ ಇಲ್ಲ. ವೈಯಕ್ತಿಕವಾಗಿ ಬೇರೆ ವಿಚಾರ ಇತ್ತು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡೋದು ಬೇಡ ಎಂದಿದ್ದಕ್ಕೆ ತಡೆ ಹಿಡಿದಿದ್ದೇನೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾತನಾಡುತ್ತೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಮುಂಬೈ ಮತ್ತು ದೆಹಲಿ ಭೇಟಿ ಮಾಡಿದ್ದ ಮಾಜಿ ಸಚಿವ,ಶಾಸಕ ರಮೇಶ್ ಜಾರಕಿಹೊಳಿ,  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನನಗೆ ರಾಜಕೀಯ ವಿರೋಧಿ, ಆತನ ಸವಾಲನ್ನು ಎದುರಿಸಬಲ್ಲೆ. ಆದರೆ ಬಿಜೆಪಿಯ ಮೂವರು ನನಗೆ ದ್ರೋಹ ಬಗೆದಿದ್ದಾರೆ. ಮೂವರ ಹೆಸರನ್ನು ಬಹಿರಂಗ ಮಾಡುವ ಸಮಯ ಬರುತ್ತದೆ. ಜೊತೆಯಲ್ಲಿದ್ದೇ ನನ್ನ ಮೇಲೆ ದ್ವೇಷ ಸಾಧಿಸುತ್ತಿದ್ದಾರೆ. ಬಿದ್ದವನ ಮೇಲೆ ಆಳಿಗೊಂದು ಕಲ್ಲು ಹೊಡೆಯುತ್ತಿದ್ದಾರೆ. ಎಲ್ಲರ ಷಡ್ಯಂತ ಬಯಲಿಗೆಳೆಯುವ ಕಾಲ ಬಂದೆ ಬರಲಿದೆ ಎಂದು ಅವರು ಸ್ವಪಕ್ಷಿಯ ವಿರುದ್ದವೇ ಹೆಚ್ಚು ಅಸಮಧಾನ ವ್ಯಕ್ತಪಡಿಸಿದ್ದರು.

ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಮುಕ್ತಾಯ; ಅಂತಿಮ ತನಿಖಾ ವರದಿ ಸಿದ್ಧ
ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ  ಪ್ರಕರಣದ ತನಿಖೆ ಮುಕ್ತಾಯವಾಗಿದ್ದು, ಅಂತಿಮ ತನಿಖಾ ವರದಿ ಸಿದ್ಧವಿದೆ ಎಂದು ಹೈಕೋರ್ಟ್​ಗೆ ಎಜಿ ಪ್ರಭುಲಿಂಗ್ ನಾವದಗಿ ತಿಳಿಸಿದ್ದಾರೆ.  ಈ ಪ್ರಕರಣಕ್ಕೆ ಸಂಬಂಧಿಸಿದ ಎಸ್ಐಟಿಯಿಂದ ಹೈಕೋರ್ಟ್​ಗೆ ಮೆಮೋ ಸಲ್ಲಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಜುಲೈ 14ರವರೆಗೆ ಅಂತಿಮ ವರದಿ ಸಲ್ಲಿಸದಂತೆ ಎಸ್ಐಟಿ ಪೊಲೀಸರಿಗೆ ಸೂಚನೆ ನೀಡಿದೆ.

ಯುವತಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್, ದಾಖಲೆಗಳ ಇಂಗ್ಲಿಷ್ ಅನುವಾದ ಸಲ್ಲಿಸದ ಹಿನ್ನೆಲೆಯಲ್ಲಿ ಇಂಗ್ಲಿಷ್ ಅನುವಾದ ಸಲ್ಲಿಸಲು ಯುವತಿ ಪರ ವಕೀಲರಿಗೆ ಸೂಚನೆ ನೀಡಿದೆ. ಜತೆಗೆ ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಿದೆ. ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದ ವಿಚಾರಣೆ ವೇಳೆ ಸಚಿವರಾದ ಮಾಧುಸ್ವಾಮಿ ಮತ್ತು ಸುಧಾಕರ್ ಅವರುಗಳ ಹೇಳಿಕೆ ಪ್ರಸ್ತಾಪಗೊಂಡಿದೆ. ಇದು ಲೈಂಗಿಕ ದೌರ್ಜನ್ಯ ಕೇಸ್ ಅಲ್ಲವೆಂದು ಈ ಸಚಿವರರುಗಳು ಈಗಾಗಲೇ ಹೇಳಿಕೆ ನೀಡಿದ್ದರು. ಈ ಹೇಳಿಕೆಗಳು ತನಿಖೆಯಲ್ಲಿ ಹಸ್ತಕ್ಷೇಪದ ಯತ್ನವೆಂದು ಪಿಐಎಲ್ ಅರ್ಜಿದಾರರ ವಕೀಲ ಜಿ.ಆರ್.ಮೋಹನ್ ಆರೋಪಿಸಿದ್ದಾರೆ. ಹೈಕೋರ್ಟ್ ಪ್ರಕರಣದ ವಿಚಾರಣೆ ನಡೆಸುತ್ತಿದೆ. ತನಿಖೆ ಬಗ್ಗೆ ಉತ್ತರಿಸಲು ಸರ್ಕಾರ ಹೈಕೋರ್ಟ್ ಮುಂದಿದೆ ಎಂದ ಹೈಕೋರ್ಟ್ ಸಿಜೆ ಅಭಯ್ ಶ್ರೀನಿವಾಸ್ ಒಕಾ ವಿಚಾರಣೆಯನ್ನು ಜುಲೈ14ಕ್ಕೆ ಮುಂದೂಡಿದ್ದಾರೆ.

ಇದನ್ನೂ ಓದಿ: 

ಸಿಡಿ ಪ್ರಕರಣದಿಂದ ಹೊರಬರದಂತೆ ಚಕ್ರವ್ಯೂಹ ರಚಿಸಿದ್ದಾರೆ; ಸ್ವಪಕ್ಷೀಯರ ವಿರುದ್ಧ ರಮೇಶ್ ಜಾರಕಿಹೊಳಿ ಕಿಡಿ

ಕಾರ್ಯಕರ್ತನಿಗೆ ಕಪಾಳಮೋಕ್ಷ: ‘ಹೆಗಲ ಮೇಲೆ ಕೈ ಹಾಕೋದು ಅಂದ್ರೆ ಏನರ್ಥ?’ ಸ್ಪಷ್ಟನೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

(MLA Ramesh Jarkiholi says Some well wishers and mathadhish suggests do not resign so i stopped)

Read Full Article

Click on your DTH Provider to Add TV9 Kannada