ಕೊರೊನಾದಿಂದ ಗುಣಮುಖವಾಗುತ್ತಲೇ ಫೀಲ್ಡಿಗಿಳಿದ ಶಾಸಕ, ಯಾರದು?

ತುಮಕೂರು: ಕೊರೊನಾ ಸೋಂಕಿನಿಂದ ಗುಣಮುಖರಾದ ಕುಣಿಗಲ್ ಕ್ಷೇತ್ರದ ಶಾಸಕ ಡಾಕ್ಟರ್ ರಂಗನಾಥ್ ತಮ್ಮ ಮನೆ ದೇವರಿಗೆ ಪೂಜೆ ಸಲ್ಲಿಸಿ, ತಮ್ಮ ಕ್ಷೇತ್ರದಲ್ಲಿರುವ ಕ್ವಾರಂಟೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಸೋಂಕಿತರಿಗೆ ಧೈರ್ಯ ತುಂಬುವ ಕಾರ್ಯ ಪ್ರಾರಂಭಿಸಿದ್ದಾರೆ. ಸ್ವತ: ಡಾಕ್ಟರ್ ಆಗಿರುವ ಶಾಸಕ ರಂಗನಾಥ್ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಹಾಗಾಗಿ 15 ದಿನಗಳ ಕಾಲ ಹೋಂ ಕ್ವಾರಂಟೈನ್ ಆಗಿದ್ದ ಶಾಸಕ ಸೋಂಕಿನಿಂದ ಗುಣಮುಖರಾದ ಕೂಡಲೇ PPE ಕಿಟ್ ಧರಿಸಿ, ತಮ್ಮ ಕ್ಷೇತ್ರದಲ್ಲಿರುವ ಎಡೆಯೂರಿನ ಮುರಾರ್ಜಿ ದೇಸಾಯಿ ಕ್ವಾರಂಟೈನ್ ಸೆಂಟರ್ […]

ಕೊರೊನಾದಿಂದ ಗುಣಮುಖವಾಗುತ್ತಲೇ ಫೀಲ್ಡಿಗಿಳಿದ ಶಾಸಕ, ಯಾರದು?
ಸಾಧು ಶ್ರೀನಾಥ್​

Updated on: Jul 24, 2020 | 12:03 PM

ತುಮಕೂರು: ಕೊರೊನಾ ಸೋಂಕಿನಿಂದ ಗುಣಮುಖರಾದ ಕುಣಿಗಲ್ ಕ್ಷೇತ್ರದ ಶಾಸಕ ಡಾಕ್ಟರ್ ರಂಗನಾಥ್ ತಮ್ಮ ಮನೆ ದೇವರಿಗೆ ಪೂಜೆ ಸಲ್ಲಿಸಿ, ತಮ್ಮ ಕ್ಷೇತ್ರದಲ್ಲಿರುವ ಕ್ವಾರಂಟೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಸೋಂಕಿತರಿಗೆ ಧೈರ್ಯ ತುಂಬುವ ಕಾರ್ಯ ಪ್ರಾರಂಭಿಸಿದ್ದಾರೆ.

ಸ್ವತ: ಡಾಕ್ಟರ್ ಆಗಿರುವ ಶಾಸಕ ರಂಗನಾಥ್ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಹಾಗಾಗಿ 15 ದಿನಗಳ ಕಾಲ ಹೋಂ ಕ್ವಾರಂಟೈನ್ ಆಗಿದ್ದ ಶಾಸಕ ಸೋಂಕಿನಿಂದ ಗುಣಮುಖರಾದ ಕೂಡಲೇ PPE ಕಿಟ್ ಧರಿಸಿ, ತಮ್ಮ ಕ್ಷೇತ್ರದಲ್ಲಿರುವ ಎಡೆಯೂರಿನ ಮುರಾರ್ಜಿ ದೇಸಾಯಿ ಕ್ವಾರಂಟೈನ್ ಸೆಂಟರ್ ಗೆ ಭೇಟಿ ನೀಡಿ ಸೋಂಕಿತರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಜೊತೆಗೆ ಕ್ವಾರಂಟೈನ್ ಸೆಂಟರ್ನ ವ್ಯವಸ್ಥೆಯನ್ನು ಪರಿಶೀಲಿಸಿ ಸ್ಥಳದಿಂದ ತೆರಳಿದ್ದಾರೆ.

Published On - 12:02 pm, Fri, 24 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us