ಉಸಿರಾಟದ ಸಮಸ್ಯೆ, ಶಾಸಕ ರಾಮದಾಸ್ ಆಸ್ಪತ್ರೆಗೆ ದಾಖಲು
ಮೈಸೂರು: ಅನಾರೋಗ್ಯ ಹಿನ್ನೆಲೆಯಲ್ಲಿ ಶಾಸಕ ಎಸ್.ಎ.ರಾಮದಾಸ್ ಅವರನ್ನು ಮೈಸೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಜಾನೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಕುಟುಂಬಸ್ಥರು ರಾಮದಾಸ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ವೈದ್ಯಕೀಯ ಸಿಬ್ಬಂದಿ ಕೋವಿಡ್ ಪರೀಕ್ಷೆ ಮಾಡಲು ಮುಂದಾಗಿದ್ದಾರೆ. ರಾಮದಾಸ್ ಕಳೆದ ಎರಡು ದಿನಗಳಿಂದ ದಸರಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಅನೇಕ ಜನರನ್ನು ಭೇಟಿಯಾಗಿದ್ದರು. ಹೀಗಾಗಿ ಕೊರೊನಾ ಟೆಸ್ಟ್ ಮಾಡಲಾಗುತ್ತಿದೆ. ಶಾಸಕ ರಾಮದಾಸ್ ಚಿಕಿತ್ಸೆಗೆ ಸ್ಪಂದಿಸುತ್ತಿರುವ ಬಗ್ಗೆ ಆಸ್ಪತ್ರೆ ಮೂಲಗಳು […]

ಮೈಸೂರು: ಅನಾರೋಗ್ಯ ಹಿನ್ನೆಲೆಯಲ್ಲಿ ಶಾಸಕ ಎಸ್.ಎ.ರಾಮದಾಸ್ ಅವರನ್ನು ಮೈಸೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಜಾನೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಕುಟುಂಬಸ್ಥರು ರಾಮದಾಸ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.
ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ವೈದ್ಯಕೀಯ ಸಿಬ್ಬಂದಿ ಕೋವಿಡ್ ಪರೀಕ್ಷೆ ಮಾಡಲು ಮುಂದಾಗಿದ್ದಾರೆ. ರಾಮದಾಸ್ ಕಳೆದ ಎರಡು ದಿನಗಳಿಂದ ದಸರಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಅನೇಕ ಜನರನ್ನು ಭೇಟಿಯಾಗಿದ್ದರು. ಹೀಗಾಗಿ ಕೊರೊನಾ ಟೆಸ್ಟ್ ಮಾಡಲಾಗುತ್ತಿದೆ. ಶಾಸಕ ರಾಮದಾಸ್ ಚಿಕಿತ್ಸೆಗೆ ಸ್ಪಂದಿಸುತ್ತಿರುವ ಬಗ್ಗೆ ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.
Published On - 10:13 am, Mon, 19 October 20




