
ಯಾದಗಿರಿ: ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾಗಿದ್ದ ಶಾಸಕರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈಗ ಶಾಸಕರ ಸಂಪರ್ಕಕ್ಕೆ ಬಂದವರೆಲ್ಲರಿಗೂ ಆತಂಕ ಶುರುವಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿ ಕ್ಷೇತ್ರದ ಬಿಜೆಪಿ ಶಾಸಕ ವೆಂಕಟರೆಡ್ಡಿ ಮುದ್ನಾಳ್ಗೆ ಕೊವಿಡ್ ಟೆಸ್ಟ್ ಮಾಡಿಸಲಾಗಿದ್ದು, ಇದೀಗ ವರದಿ ಪಾಸಿಟಿವ್ ಬಂದಿದೆ.
ನಿನ್ನೆ ಶಾಸಕರು ಬಿಜೆಪಿ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈಗ ಅವರ ಸಂಪರ್ಕಕ್ಕೆ ಬಂದವರೆಲ್ಲರಿಗೂ ಆತಂಕ ಶುರುವಾಗಿದೆ. ಕಾರ್ಯಕ್ರಮದಲ್ಲಿ ಡಿಸಿ, ಎಸ್ಪಿ ಸೇರಿದಂತೆ ಹಲವರು ಭಾಗಿಯಾಗಿದ್ದು, ತಮ್ಮ ಸಂಪರ್ಕಕ್ಕೆ ಬಂದವರೆಲ್ಲರಿಗೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಶಾಸಕರು ಮನವಿ ಮಾಡಿಕೊಂಡಿದ್ದಾರೆ.