AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಹಣೆಬರಹ ಕೆಟ್ಟಿರಬೇಕು.. ಅದಕ್ಕೆ ಮಂತ್ರಿಯಾಗಿಲ್ಲ -MTB ನಾಗರಾಜ್​ ಮನದಾಳದ ನೋವು

ನನ್ನ ಹಣೆಬರಹ ಕೆಟ್ಟಿರಬೇಕು. ಅದಕ್ಕೆ ನಾನು ಮಂತ್ರಿಯಾಗಿಲ್ಲ ಎಂದು ವಿಧಾನಪರಿಷತ್ ಸದಸ್ಯ MTB ನಾಗರಾಜ್​ ತಮ್ಮ ನೋವು ತೋಡಿಕೊಂಡರು. ಸಚಿವ ರಮೇಶ್ ಜಾರಕಿಹೊಳಿರನ್ನು ಭೇಟಿಯಾದ ಬಳಿಕ MTB ನಾಗರಾಜ್ ಹೇಳಿದರು.

ನನ್ನ ಹಣೆಬರಹ ಕೆಟ್ಟಿರಬೇಕು.. ಅದಕ್ಕೆ ಮಂತ್ರಿಯಾಗಿಲ್ಲ -MTB ನಾಗರಾಜ್​ ಮನದಾಳದ ನೋವು
MTB ನಾಗರಾಜ್
KUSHAL V
| Edited By: |

Updated on: Nov 28, 2020 | 1:31 PM

Share

ಬೆಂಗಳೂರು: ನನ್ನ ಹಣೆಬರಹ ಕೆಟ್ಟಿರಬೇಕು. ಅದಕ್ಕೆ ನಾನು ಮಂತ್ರಿಯಾಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯ MTB ನಾಗರಾಜ್​ ತಮ್ಮ ನೋವು ತೋಡಿಕೊಂಡಿದ್ದಾರೆ. ಸಚಿವ ರಮೇಶ್ ಜಾರಕಿಹೊಳಿರನ್ನು ಭೇಟಿಯಾದ ಬಳಿಕ MTB ನಾಗರಾಜ್ ಹೀಗೆ ಹತಾಶೆಯ ಮಾತನ್ನಾಡಿದ್ದಾರೆ.

ನಾವು ಮಂತ್ರಿಯಾಗಿದ್ದವರು, ಈಗ ಶಾಸಕರಾಗಿದ್ದೇವೆ. ಈಗ ಶಾಸಕರಾಗಿರುವುದು ನಮಗೆ ಕಷ್ಟ. ರಮೇಶ್ ಜಾರಕಿಹೊಳಿ ಭೇಟಿಗೆ ಬೇರೆ ವಿಶೇಷ ಇಲ್ಲ. ನಾವೆಲ್ಲಾ 15 ದಿನ ಮುಂಬೈನಲ್ಲಿ ಒಟ್ಟಾಗಿ ಇದ್ದೆವು. ಹೀಗಾಗಿ ಕಷ್ಟ, ಸುಖ ಮಾತನಾಡಲು ಭೇಟಿಯಾಗಿದ್ದೆ ಎಂದು ನಾಗರಾಜ್ ಹೇಳಿದರು.

ಸಚಿವ ಸ್ಥಾನ ಕೊಡುತ್ತೇನೆ, ಸಚಿವರನ್ನಾಗಿ ಮಾಡುತ್ತೇನೆ ಎಂದು ಸಿಎಂ ಹೇಳುತ್ತಲೇ ಇದ್ದಾರೆ. ಅದ್ರೆ ಈವರೆಗೂ ಮಂತ್ರಿ ಮಾಡಿಲ್ಲ. ನಾವು ಈಗ ಮಂತ್ರಿ ಆಗುವವರೆಗೂ ಕಾಯಲೇಬೇಕು. ನಾನು ವಿಧಾನ ಪರಿಷತ್ ಸದಸ್ಯನಾಗಿ 5 ತಿಂಗಳಾಗಿದೆ. 17 ಜನ ಒಟ್ಟಾಗಿ ಇದ್ದೆವು, ನಾವು ಇನ್ನೂ ಮಂತ್ರಿ ಆಗಿಲ್ಲ. ನಮ್ಮ ಹಣೆಬರಹ ಕೆಟ್ಟಿರಬೇಕು, ಹೀಗಾಗಿ ಮಂತ್ರಿ ಆಗಿಲ್ಲ. ಆದರೆ, ರಮೇಶ್ ಜಾರಕಿಹೊಳಿ ಮೇಲೆ ನಮಗೆ ಅಸಮಾಧಾನವಿಲ್ಲ ಎಂದು ನಾಗರಾಜ್ ಹೇಳಿದರು.

ಸಚಿವ ರಮೇಶ್ ಜಾರಕಿಹೊಳಿ ನಿವಾಸಕ್ಕೆ MTB ಇಂದು ಭೇಟಿ ಕೊಟ್ಟಿದ್ದರು. ಸಿಎಂ ಭೇಟಿ ಬಳಿಕ ನಾಗರಾಜ್​ ಸದಾಶಿವನಗರದಲ್ಲಿರುವ ರಮೇಶ್ ನಿವಾಸಕ್ಕೆ ಭೇಟಿ ಕೊಟ್ಟರು. MTB ನಾಗರಾಜ್​ ನಿನ್ನೆ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿಯೂ ಭಾಗಿಯಾಗಿದ್ದರು.

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ