AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ನಲ್ಲಿ ಹೋಗ್ತಿದ್ದಾಗ ಮೊಬೈಲ್ ಸ್ಫೋಟ, ಬೈಕ್​ ಸವಾರನ ಎದೆ-ಕುತ್ತಿಗೆಗೆ ಗಾಯ!

ಮೈಸೂರು: ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಮೊಬೈಲ್ ಸ್ಫೋಟಗೊಂಡು ಬೈಕ್ ಸವಾರ ಗಾಯಗೊಂಡಿರುವ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಸಮೀಪ ಸಂಭವಿಸಿದೆ. ಹುಲ್ಲಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಹೆಚ್.ಎಂ.ಬಸವರಾಜು(47) ಗಾಯಗೊಂಡವರು. ಕುರಿಹುಂಡಿ ಗ್ರಾಮದ ರಸ್ತೆಯಿಂದ ಹುಲ್ಲಹಳ್ಳಿ ಗ್ರಾಮದ ಕಡೆಗೆ ಬೈಕ್​ನಲ್ಲಿ ಬಸವರಾಜು ತೆರಳುತ್ತಿದ್ದರು. ಈ ವೇಳೆ ಮೊಬೈಲ್ ರಿಂಗ್ ಆಗುತ್ತಿದ್ದಂತೆ ಏಕಾಏಕಿ ಸ್ಫೋಟಗೊಂಡಿದೆ. ಮೊಬೈಲ್ ಸ್ಫೋಟದಿಂದ ನಿಯಂತ್ರಣ ಕಳೆದುಕೊಂಡ ಸವಾರ ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. […]

ಬೈಕ್​ನಲ್ಲಿ ಹೋಗ್ತಿದ್ದಾಗ ಮೊಬೈಲ್ ಸ್ಫೋಟ, ಬೈಕ್​ ಸವಾರನ ಎದೆ-ಕುತ್ತಿಗೆಗೆ ಗಾಯ!
ಸಾಧು ಶ್ರೀನಾಥ್​
|

Updated on:Feb 17, 2020 | 11:39 AM

Share

ಮೈಸೂರು: ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಮೊಬೈಲ್ ಸ್ಫೋಟಗೊಂಡು ಬೈಕ್ ಸವಾರ ಗಾಯಗೊಂಡಿರುವ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಸಮೀಪ ಸಂಭವಿಸಿದೆ. ಹುಲ್ಲಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಹೆಚ್.ಎಂ.ಬಸವರಾಜು(47) ಗಾಯಗೊಂಡವರು.

ಕುರಿಹುಂಡಿ ಗ್ರಾಮದ ರಸ್ತೆಯಿಂದ ಹುಲ್ಲಹಳ್ಳಿ ಗ್ರಾಮದ ಕಡೆಗೆ ಬೈಕ್​ನಲ್ಲಿ ಬಸವರಾಜು ತೆರಳುತ್ತಿದ್ದರು. ಈ ವೇಳೆ ಮೊಬೈಲ್ ರಿಂಗ್ ಆಗುತ್ತಿದ್ದಂತೆ ಏಕಾಏಕಿ ಸ್ಫೋಟಗೊಂಡಿದೆ. ಮೊಬೈಲ್ ಸ್ಫೋಟದಿಂದ ನಿಯಂತ್ರಣ ಕಳೆದುಕೊಂಡ ಸವಾರ ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ.

ಮೊಬೈಲ್​ ಸ್ಫೋಟದಿಂದ ಬಸವರಾಜು ಎದೆ ಹಾಗೂ ಕುತ್ತಿಗೆ ಭಾಗಗಳಿಗೆ ಗಂಭೀರ ಗಾಯಗಳಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳು ಬಸವರಾಜುರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಾನವೀಯತೆ ಮರೆತ ವಾಹನ ಸವಾರರು: ಮೊಬೈಲ್ ಸ್ಫೋಟಗೊಂಡು ನೆಲಕ್ಕುರುಳಿ ಬಿದ್ದು ರಸ್ತೆ ಮಧ್ಯೆ ನರಳಾಡುತ್ತಿದ್ದರೂ ತಕ್ಷಣ ಜನರು ಬೈಕ್ ಸವಾರನನ್ನು ರಕ್ಷಿಸಲು ಮುಂದಾಗಲಿಲ್ಲ. ಬೈಕ್ ಸವಾರನ ರಕ್ಷಣೆಗೆ ಧಾವಿಸದೆ ಮೊಬೈಲ್​ನಲ್ಲಿ ವಿಡಿಯೋ ಮಾಡುತ್ತಾ ವಾಹನ ಸವಾರರು ಅಮಾನವೀಯತೆ ಮೆರೆದಿದ್ದಾರೆ. ಸಾಕಷ್ಟು ಜಾಗೃತಿ ಮೂಡಿಸಿದರು ನೊಂದವರ ನೆರವಿಗೆ ಧಾವಿಸದೆ ಕೇವಲ ಮೊಬೈಲ್​ನಲ್ಲಿ ಚಿತ್ರೀಕರಣ ಮಾಡುತ್ತಿರುವುದು ಕಂಡುಬಂದಿದೆ.

Published On - 11:30 am, Mon, 17 February 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್