AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿಯವರೇ ನನ್ನನ್ನು ಮುಖ್ಯಮಂತ್ರಿ ಮಾಡಲು ಮುಂದಾಗಿದ್ದರು: ಮಾಜಿ ಸಿಎಂ HDK

ತುಮಕೂರು: ಬಿಜೆಪಿಯವರು ನನ್ನನ್ನು ಸಿಎಂ ಮಾಡಲು ಮುಂದಾಗಿದ್ದರು ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಹೌದು ಶಿರಾದಲ್ಲಿ ಜೆಡಿಎಸ್​ ಸಭೆಯಲ್ಲಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ ಈ ರೀತಿ ಹೇಳಿದ್ದಾರೆ. ಕೇಂದ್ರದಿಂದ ಪ್ರಧಾನಿ ನರೇಂದ್ರ ಮೋದಿಯವರೇ ಆಫರ್ ಮಾಡಿದ್ದರು. 5 ವರ್ಷಗಳ ಕಾಲ ಯಾರೂ ಟಚ್ ಮಾಡಲ್ಲ ಅಂದಿದ್ದರು. ಕಾಂಗ್ರೆಸ್‌ನ ಸಂಕುಚಿತ ಮನೋಭಾವದಿಂದ ರಾಜ್ಯದಲ್ಲಿ ಈಗ ದರಿದ್ರ ಸರ್ಕಾರ ಬಂದಿದೆ. ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದು ರಾಹುಲ್ ಗಾಂಧಿಯಿಂದಲೇ ಹಾಸನದಲ್ಲಿ ಭಾಷಣ […]

ಮೋದಿಯವರೇ ನನ್ನನ್ನು ಮುಖ್ಯಮಂತ್ರಿ ಮಾಡಲು ಮುಂದಾಗಿದ್ದರು: ಮಾಜಿ ಸಿಎಂ HDK
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Sep 30, 2020 | 4:55 PM

Share

ತುಮಕೂರು: ಬಿಜೆಪಿಯವರು ನನ್ನನ್ನು ಸಿಎಂ ಮಾಡಲು ಮುಂದಾಗಿದ್ದರು ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಹೌದು ಶಿರಾದಲ್ಲಿ ಜೆಡಿಎಸ್​ ಸಭೆಯಲ್ಲಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ ಈ ರೀತಿ ಹೇಳಿದ್ದಾರೆ.

ಕೇಂದ್ರದಿಂದ ಪ್ರಧಾನಿ ನರೇಂದ್ರ ಮೋದಿಯವರೇ ಆಫರ್ ಮಾಡಿದ್ದರು. 5 ವರ್ಷಗಳ ಕಾಲ ಯಾರೂ ಟಚ್ ಮಾಡಲ್ಲ ಅಂದಿದ್ದರು. ಕಾಂಗ್ರೆಸ್‌ನ ಸಂಕುಚಿತ ಮನೋಭಾವದಿಂದ ರಾಜ್ಯದಲ್ಲಿ ಈಗ ದರಿದ್ರ ಸರ್ಕಾರ ಬಂದಿದೆ. ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದು ರಾಹುಲ್ ಗಾಂಧಿಯಿಂದಲೇ ಹಾಸನದಲ್ಲಿ ಭಾಷಣ ಮಾಡಿದ್ದರು ಎಂದು ಹೆಚ್​ಡಿ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಪ್ರಹಾರ ಮಾಡಿದ್ದಾರೆ.

ಸಿಎಂ ಆಗುವ ಆಸೆ ಇರಲಿಲ್ಲ, ಆರೋಗ್ಯ ಸರಿ ಇಲ್ಲ ಅಂದಿದ್ದೆ: ಕಳೆದ ವಿಧಾನಸಭೆ ಫಲಿತಾಂಶ ನೋಡಿ ರಾಜಕೀಯದಿಂದ ನಿರ್ಗಮಿಸಬೇಕು ಅಂದುಕೊಂಡೆ. ಆದ್ರೆ ಕಾಂಗ್ರೆಸ್​ನವರು ತರಾತುರಿಯಲ್ಲಿ ದೇವೇಗೌಡರಿಗೆ ಫೋನ್ ಮಾಡಿ ಕರೆದ್ರು. ದೇವೇಗೌಡರು ಕುಮಾರಸ್ವಾಮಿ ಆರೋಗ್ಯ ಸರಿ ಇಲ್ಲ. ನಿಮ್ಮಲ್ಲಿ ಯಾರಿಗಾದರೂ ಮುಖ್ಯಮಂತ್ರಿ ಮಾಡಿ ಅಂದಿದ್ರು. ಎಷ್ಟೇ ಹೇಳಿದ್ರೂ ಕೇಳದೇ ನನಗೆ ಕಾಂಗ್ರೆಸ್​ನವರು ಮುಖ್ಯಮಂತ್ರಿ ಪಟ್ಟ ಕಟ್ಟಿದ್ರು. ನನಗೆ ಮುಖ್ಯಮಂತ್ರಿ ಆಗುವ ಆಸೆ ಇರಲಿಲ್ಲ ಎಂದಿದ್ದಾರೆ.

ಕಾರ್ಯಕರ್ತರ ಸಭೆ ಮಾಡಲು ಆಗಿಲ್ಲ: ಇನ್ನು ಕೆಲ ಕಾರಣಗಳಿಂದ ಕಾರ್ಯಕರ್ತರ ಸಭೆ ಮಾಡಲು ಆಗಿಲ್ಲ ಎಂದು ಶಿರಾ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ರು. ಕಾಂಗ್ರೆಸ್ ಮತ್ತು ಬಿಜೆಪಿ ಬಹಳ ವೇಗದಲ್ಲಿ ಹೊರಟಿದೆ. ಸಭೆ ಸಮಾರಂಭ ಮಾಡಿದೆ. ಆದರೂ ಇದರಿಂದ ಕಾರ್ಯಕರ್ತರು ಎದೆಗುಂದಬೇಕಿಲ್ಲ. ಈ ಕ್ಷೇತ್ರದಲ್ಲಿ ಕಾಡು ಗೊಲ್ಲರು ನನಗೆ ಸತ್ಕಾರ ನೀಡಿದ್ದಾರೆ. ನಾನು ಗ್ರಾಮ ವಾಸ್ತವ್ಯ ಮಾಡಿದ್ದು ಕಾಡು ಗೊಲ್ಲರ ಮನೆಯಲ್ಲಿ, ಶಿರಾ ಕ್ಷೇತ್ರದಲ್ಲಿ ಗೊಲ್ಲ ಸಮುದಾಯದ ಮತ ನಿರ್ಣಾಯಕ ಎಂದು ಕುಮಾರಸ್ವಾಮಿ ತಿಳಿಸಿದ್ರು.

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!