ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಅವಘಡ.. ಹೊತ್ತಿ ಉರಿದ ಮೋಕ್ಷ ಅಗರಬತ್ತಿ ಕಾರ್ಖಾನೆ

ಮೋಕ್ಷ ಅಗರಬತ್ತಿ ಕಾರ್ಖಾನೆಗೆ ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿ ನಂದಿಸುವುದಕ್ಕೆ ಹರ ಸಾಹಸ ಪಡುವಂತ ಪರಿಸ್ಥಿತಿ ಉಂಟಾಗಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರ್ಮಿಕರು ಕಾರ್ಖಾನೆಯಿಂದ ಹೊರ ಓಡಿದ್ದಾರೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಅವಘಡ.. ಹೊತ್ತಿ ಉರಿದ ಮೋಕ್ಷ ಅಗರಬತ್ತಿ ಕಾರ್ಖಾನೆ
ಮೋಕ್ಷ ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ
Updated By: ಸಾಧು ಶ್ರೀನಾಥ್​

Updated on: Jan 29, 2021 | 2:15 PM

ರಾಮನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಅವಘಾಡ ಸಂಭವಿಸಿದ್ದು ಅಗರಬತ್ತಿ ಕಾರ್ಖಾನೆಯಲ್ಲಿ ಹೊತ್ತಿ ಉರಿದ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ತರಳು ಗ್ರಾಮದಲ್ಲಿ ನಡೆದಿದೆ.

ಶಾರ್ಟ್ ಸರ್ಕ್ಯೂಟ್​ನಿಂದ ಇಂತಹದೊಂದು ಅವಘಡ ಸಂಭವಿಸಿದ್ದು ಮೋಕ್ಷ ಅಗರಬತ್ತಿ ಕಾರ್ಖಾನೆಗೆ ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿ ನಂದಿಸುವುದಕ್ಕೆ ಹರ ಸಾಹಸ ಪಡುವಂತಹ ಪರಿಸ್ಥಿತಿ ಉಂಟಾಗಿದೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರ್ಮಿಕರು ಕಾರ್ಖಾನೆಯಿಂದ ಹೊರ ಓಡಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಕಾರ್ಮಿಕರ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.

ಮೆಕ್ಕೆ ಜೋಳದ ರಾಶಿಗೆ ಬೆಂಕಿ ಹಾಕಿದ ದುಷ್ಕರ್ಮಿಗಳು; 5 ಎಕರೆಯಲ್ಲಿ ಬೆಳೆದಿದ್ದ ಜೋಳದ ತೆನೆಗಳು ಭಸ್ಮ