ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳನುಗ್ಗಿದ ಖದೀಮರು.. ಲಕ್ಷಾಂತರ ರೂ. ಕದ್ದು ಪರಾರಿ, ಎಲ್ಲಿ?
ಕೋಲಾರ: ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ, ಬೀಗ ಒಡೆದು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಕೋಲಾರ ನಗರದ ಪಿಸಿ ಬಡಾವಣೆಯಲ್ಲಿ ಈ ಘಟನೆ ಸಂಭವಿಸಿದ್ದು, ಗಂಗಾಧರ್ ಎಂಬುವವರ ಮನೆಗೆ ಕಳ್ಳರು ಕನ್ನ ಹಾಕಿದ್ದಾರೆ. ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ನಗದು ಹಾಗೂ ಆಭರಣಗಳನ್ನ ಖದೀಮರು ಕಳವು ಮಾಡಿ ಪರಾರಿಯಾಗಿದ್ದಾರೆ. ಸದ್ಯ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಬೆರಳಚ್ಚು ತಜ್ಞರು ಮತ್ತು ಶ್ವಾನದಳದ ಸಿಬ್ಬಂದಿ ಪರಿಶೀಲನೆ ಮಾಡಿ, ಆರೋಪಿಗಳ ಪತ್ತೆಗೆ […]
ಕೋಲಾರ: ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ, ಬೀಗ ಒಡೆದು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಕೋಲಾರ ನಗರದ ಪಿಸಿ ಬಡಾವಣೆಯಲ್ಲಿ ಈ ಘಟನೆ ಸಂಭವಿಸಿದ್ದು, ಗಂಗಾಧರ್ ಎಂಬುವವರ ಮನೆಗೆ ಕಳ್ಳರು ಕನ್ನ ಹಾಕಿದ್ದಾರೆ. ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ನಗದು ಹಾಗೂ ಆಭರಣಗಳನ್ನ ಖದೀಮರು ಕಳವು ಮಾಡಿ ಪರಾರಿಯಾಗಿದ್ದಾರೆ. ಸದ್ಯ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಬೆರಳಚ್ಚು ತಜ್ಞರು ಮತ್ತು ಶ್ವಾನದಳದ ಸಿಬ್ಬಂದಿ ಪರಿಶೀಲನೆ ಮಾಡಿ, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.