ಯಶವಂತಪುರ ವಾರ್ಡ್‌ನಲ್ಲಿ ಹಣ ಹಂಚಿಕೆ: ಕಾಂಗ್ರೆಸ್ ಕಾರ್ಯಕರ್ತನಿಂದ ರೂ1 ಲಕ್ಷ 5 ಸಾವಿರ ಹಣ ವಶ
ಬೆಂಗಳೂರು: ನವೆಂಬರ್ 3ರಂದು ರಾಜರಾಜೇಶ್ವರಿನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಣವನ್ನು ಹಂಚಿಕೆ ಮಾಡುತ್ತಿದ್ದ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಯಶವಂತಪುರ ವಾರ್ಡ್‌ನಲ್ಲಿ ಹಣ ಹಂಚಿಕೆ ಮಾಡುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಶವಂತಪುರ ವಾರ್ಡ್ ಬಿ.ಕೆ.ನಗರ 12ನೇ ಮುಖ್ಯರಸ್ತೆಯಲ್ಲಿ ಮತದಾರರಿಗೆ ಅಮಿಷ ತೋರಿಸಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಬೇಕು ಎಂದು ಹಣ ಹಂಚಿಕೆ ಮಾಡುತ್ತಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನನ್ನು ಬಂಧಿಸಲಾಗಿದೆ. ಆತನಿಂದ ಸುಮಾರು ₹1 ಲಕ್ಷ 5 ಸಾವಿರ ಹಣವನ್ನು ವಶಕ್ಕೆ ಪಡೆಯಲಾಗಿದೆ. ಎನ್‌ಸಿಆರ್ […]
ಬೆಂಗಳೂರು: ನವೆಂಬರ್ 3ರಂದು ರಾಜರಾಜೇಶ್ವರಿನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಣವನ್ನು ಹಂಚಿಕೆ ಮಾಡುತ್ತಿದ್ದ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಯಶವಂತಪುರ ವಾರ್ಡ್‌ನಲ್ಲಿ ಹಣ ಹಂಚಿಕೆ ಮಾಡುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಯಶವಂತಪುರ ವಾರ್ಡ್ ಬಿ.ಕೆ.ನಗರ 12ನೇ ಮುಖ್ಯರಸ್ತೆಯಲ್ಲಿ ಮತದಾರರಿಗೆ ಅಮಿಷ ತೋರಿಸಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಬೇಕು ಎಂದು ಹಣ ಹಂಚಿಕೆ ಮಾಡುತ್ತಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನನ್ನು ಬಂಧಿಸಲಾಗಿದೆ. ಆತನಿಂದ ಸುಮಾರು ₹1 ಲಕ್ಷ 5 ಸಾವಿರ ಹಣವನ್ನು ವಶಕ್ಕೆ ಪಡೆಯಲಾಗಿದೆ. ಎನ್‌ಸಿಆರ್ ದಾಖಲಿಸಿರುವ ಯಶವಂತಪುರ ಪೊಲೀಸರು ಕಾರ್ಯಕರ್ತನ ಹೇಳಿಕೆ ಪಡೆದು ವಾಪಸ್ ಕಳಿಸಿದ್ದಾರೆ.