ಚಿಕ್ಕ ತಿರುಪತಿ ದೇವಾಲಯದ ಅಧಿಕಾರಿಗಳೇ ಹುಂಡಿ ಹಣ ಎಗರಿಸಿದರಾ?

ಕೋಲಾರ: ಜಿಲ್ಲೆಯ ಪ್ರಸಿದ್ಧ ಚಿಕ್ಕತಿರುಪತಿ ದೇವಾಲಯದಲ್ಲಿ ಹುಂಡಿ ಎಣಿಕೆ ವೇಳೆ ಹಣದ ಬಂಡಲ್ ಎಗರಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಮಾಲೂರು ತಾಲೂಕಿನ ಚಿಕ್ಕತಿರುಪತಿಯ ವೆಂಕಟರಮಣಸ್ವಾಮಿ ದೇವಾಲಯದ ಸಿಬ್ಬಂದಿಯೇ ಹಣ ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಜುಲೈ 2019 ರಂದು ದೇವಾಲಯದ ಹುಂಡಿ ಹಣ ಎಣಿಕೆ ಕಾರ್ಯ ನಡೆದಿತ್ತು. ಆಗ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ನರಸಿಂಹಯ್ಯ ಮತ್ತು ಆತನ ಸಹಾಯಕರು ಹುಂಡಿ ಎಣಿಕೆ ವೇಳೆ ಎರಡು ಬಂಡಲ್​ ಹಣ ತೆಗೆದುಕೊಂಡು ಹೋಗಿದ್ದಾರೆ. ಹಣ ತೆಗೆದುಕೊಂಡು ಹೋಗುವ ಮುನ್ನ ವಿಡಿಯೋ ಕ್ಯಾಮರಾ ಮರೆಮಾಚಿರುವ […]

ಚಿಕ್ಕ ತಿರುಪತಿ ದೇವಾಲಯದ ಅಧಿಕಾರಿಗಳೇ ಹುಂಡಿ ಹಣ ಎಗರಿಸಿದರಾ?
ಸಾಧು ಶ್ರೀನಾಥ್​

Updated on: Jan 30, 2020 | 4:20 PM

ಕೋಲಾರ: ಜಿಲ್ಲೆಯ ಪ್ರಸಿದ್ಧ ಚಿಕ್ಕತಿರುಪತಿ ದೇವಾಲಯದಲ್ಲಿ ಹುಂಡಿ ಎಣಿಕೆ ವೇಳೆ ಹಣದ ಬಂಡಲ್ ಎಗರಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಮಾಲೂರು ತಾಲೂಕಿನ ಚಿಕ್ಕತಿರುಪತಿಯ ವೆಂಕಟರಮಣಸ್ವಾಮಿ ದೇವಾಲಯದ ಸಿಬ್ಬಂದಿಯೇ ಹಣ ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಜುಲೈ 2019 ರಂದು ದೇವಾಲಯದ ಹುಂಡಿ ಹಣ ಎಣಿಕೆ ಕಾರ್ಯ ನಡೆದಿತ್ತು. ಆಗ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ನರಸಿಂಹಯ್ಯ ಮತ್ತು ಆತನ ಸಹಾಯಕರು ಹುಂಡಿ ಎಣಿಕೆ ವೇಳೆ ಎರಡು ಬಂಡಲ್​ ಹಣ ತೆಗೆದುಕೊಂಡು ಹೋಗಿದ್ದಾರೆ. ಹಣ ತೆಗೆದುಕೊಂಡು ಹೋಗುವ ಮುನ್ನ ವಿಡಿಯೋ ಕ್ಯಾಮರಾ ಮರೆಮಾಚಿರುವ ದೃಶ್ಯ ಸೆರೆಯಾಗಿದೆ. ಈ ಬಗ್ಗೆ ಅರ್ಚಕರು ಹಾಗೂ ಸಾರ್ವಜನಿಕರು ದೂರು ನೀಡಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸುವುದಾಗಿ ಟಿವಿ9ಗೆ ಎಸಿ ಸೋಮಶೇಖರ್ ತಿಳಿಸಿದ್ದಾರೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us