ಚಿಕ್ಕಮಗಳೂರು: ವಿಪರೀತ ಮಳೆಯಿಂದಾಗಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಶೃಂಗೇರಿ ಪಟ್ಟಣದ ಜನತೆ ಆತಂಕದ ಕ್ಷಣಗಳನ್ನು ಎದುರಿಸುತ್ತಿದ್ದಾರೆ.
ಶೃಂಗೇರಿ ಶಾರದಾ ದೇವಾಲಯದ ವಾಹನ ಪಾರ್ಕಿಂಗ್ ಜಾಗ ಮುಳುಗಡೆಯಾಗಿದೆ. ಕಪ್ಪೆ ಶಂಕರ ದೇವಾಲಯ, ಸಂಧ್ಯಾವಂದನ ಮಂಟಪ ಕೂಡ ಮುಳುಗಡೆಯಾಗಿದೆ. ಗಾಂಧಿ ಮೈದಾನದಲ್ಲಿ ಸುಮಾರು 10 ಅಡಿ ನಿಂತಿರುವ ನೀರು.
ಧಾರಾಕಾರ ಮಳೆಯಿಂದ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿ. ತುಂಗಾ ನದಿಪಾತ್ರದ ಮನೆಗಳ ಸ್ಥಳಾಂತರವಾಗುತ್ತಿದೆ. ಕೆರೆಕಟ್ಟೆ, ಕಿಗ್ಗಾ, ನೆಮ್ಮಾರ್ ಪ್ರದೇಶಗಳಲ್ಲಿ ಸತತವಾಗಿ ಮಳೆ ಬೀಳುತ್ತಿದೆ.
Published On - 10:26 am, Fri, 7 August 20