ಕದ್ರಾ ಜಲಾಶಯದಿಂದ ನೀರು ಬಿಡುಗಡೆ, ಕಾಳಿ ನದಿ ಪಾತ್ರದ ಜನರಲ್ಲಿ ಆತಂಕ

|

Updated on: Aug 07, 2020 | 1:10 PM

ಉತ್ತರ ಕನ್ನಡ: ಜಿಲ್ಲೆಯ ಎಲ್ಲಾ ಕಡೆಯಲ್ಲೂ ಮಾನ್ಸೂನ್ ತನ್ನ ಆರ್ಭಟವನ್ನು ಮುಂದುವರೆಸಿದೆ. ಹೀಗಾಗಿ ಕದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿರುವುದರಿಂದ ಜಲಾಶಯದ ಹತ್ತು ಗೇಟ್‌ಗಳ ಪೈಕಿ 7 ಗೇಟ್ ಮೂಲಕ ಕಾಳಿ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ನದಿಪಾತ್ರದ ಜನರಲ್ಲಿ ಆತಂಕ ಶುರುವಾಗಿದೆ. ಕಾರವಾರದ ಕದ್ರಾ ಜಲಾಶಯ ಈಗಾಗಲೇ ಭರ್ತಿಯಾಗಿದ್ದು, ಸತತ ಮೂರು ದಿನಗಳಿಂದಲೂ ಕಾಳಿನದಿಗೆ 65000 ಕ್ಯೂಸೆಕ್ಸ್ ನೀರನ್ನು ಕಾಳಿ ನದಿಗೆ ಬಿಡುಗಡೆ ಮಾಡಲಾಗಿದೆ. ಹೀಗಾಗಿ ಭದ್ರಾ ಜಲಾಶಯದ ವ್ಯಾಪ್ತಿಯಲ್ಲಿ ಹಿಂದುವಾಡಾ ಸೇರಿ ವಿವಿಧ ಪ್ರದೇಶಗಳ […]

ಕದ್ರಾ ಜಲಾಶಯದಿಂದ ನೀರು ಬಿಡುಗಡೆ, ಕಾಳಿ ನದಿ ಪಾತ್ರದ ಜನರಲ್ಲಿ ಆತಂಕ
Follow us on

ಉತ್ತರ ಕನ್ನಡ: ಜಿಲ್ಲೆಯ ಎಲ್ಲಾ ಕಡೆಯಲ್ಲೂ ಮಾನ್ಸೂನ್ ತನ್ನ ಆರ್ಭಟವನ್ನು ಮುಂದುವರೆಸಿದೆ. ಹೀಗಾಗಿ ಕದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿರುವುದರಿಂದ ಜಲಾಶಯದ ಹತ್ತು ಗೇಟ್‌ಗಳ ಪೈಕಿ 7 ಗೇಟ್ ಮೂಲಕ ಕಾಳಿ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ನದಿಪಾತ್ರದ ಜನರಲ್ಲಿ ಆತಂಕ ಶುರುವಾಗಿದೆ.

ಕಾರವಾರದ ಕದ್ರಾ ಜಲಾಶಯ ಈಗಾಗಲೇ ಭರ್ತಿಯಾಗಿದ್ದು, ಸತತ ಮೂರು ದಿನಗಳಿಂದಲೂ ಕಾಳಿನದಿಗೆ 65000 ಕ್ಯೂಸೆಕ್ಸ್ ನೀರನ್ನು ಕಾಳಿ ನದಿಗೆ ಬಿಡುಗಡೆ ಮಾಡಲಾಗಿದೆ. ಹೀಗಾಗಿ ಭದ್ರಾ ಜಲಾಶಯದ ವ್ಯಾಪ್ತಿಯಲ್ಲಿ ಹಿಂದುವಾಡಾ ಸೇರಿ ವಿವಿಧ ಪ್ರದೇಶಗಳ ಜಲಾವೃತಗೊಂಡಿವೆ.

ಹಾಗೂ ನದಿಪಾತ್ರದ ಗ್ರಾಮಗಳು ಜಲಾವೃತಗೊಂಡಿದ್ದು , ಆ ಭಾಗದ ಜನರನ್ನು ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಸದ್ಯ ಕರಾವಳಿ ಭಾಗದಲ್ಲಿ ವರುಣನ ಅಬ್ಬರ ಕೊಂಚ ಕಡಿಮೆಯಾಗಿದ್ದು, ಜನರು ನಿಟ್ಟುಸಿರು ಬಿಡುತ್ತಿದ್ದಾರೆ.

Published On - 12:58 pm, Fri, 7 August 20