ಆಸ್ತಿ ವಿವಾದ, ಸಾಲಬಾಧೆ: ಬೆಂಗಳೂರಿನ ತಾಯಿ-ಮಗಳು ನರಸಾಪುರ ಕೆರೆಗೆ ಜಿಗಿದು ಆತ್ಮಹತ್ಯೆ
ಡೆತ್‌ನೋಟ್ ಬರೆದಿಟ್ಟು ತಾಯಿ, ಮಗಳು ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ರಿ ನಂದಿತಾ ಅವರು ಮೂರು ತಿಂಗಳ ಹಿಂದಷ್ಟೇ ಗಂಡನನ್ನು ಕಳೆದುಕೊಂಡಿದ್ದರು. ಗಂಡನ ಮನೆಯವರಿಂದ ಆಸ್ತಿ ವಿಚಾರವಾಗಿ ಕಿರುಕುಳಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕೋಲಾರ: ಆಸ್ತಿ ವಿವಾದ, ಸಾಲಬಾಧೆ ಹಿನ್ನೆಲೆಯಲ್ಲಿ ಬೆಂಗಳೂರಿನ ಹೊರಮಾವು ಮೂಲದ ತಾಯಿ ಮತ್ತು ಮಗಳು ಕೋಲಾರ ತಾಲೂಕಿನ ನರಸಾಪುರ ಕೆರೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ನಂದಿತಾ (45) ಮತ್ತು ಪುತ್ರಿ ಪ್ರಗತಿ (21) ದುಪ್ಪಟ್ಟ ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.