ಆಸ್ತಿ ವಿವಾದ, ಸಾಲಬಾಧೆ: ಬೆಂಗಳೂರಿನ ತಾಯಿ-ಮಗಳು ನರಸಾಪುರ ಕೆರೆಗೆ ಜಿಗಿದು ಆತ್ಮಹತ್ಯೆ

ಡೆತ್‌ನೋಟ್ ಬರೆದಿಟ್ಟು ತಾಯಿ, ಮಗಳು ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ರಿ ನಂದಿತಾ ಅವರು ಮೂರು ತಿಂಗಳ ಹಿಂದಷ್ಟೇ ಗಂಡನನ್ನು ಕಳೆದುಕೊಂಡಿದ್ದರು. ಗಂಡನ ಮನೆಯವರಿಂದ ಆಸ್ತಿ ವಿಚಾರವಾಗಿ ಕಿರುಕುಳಕ್ಕೆ‌ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. 

ಆಸ್ತಿ ವಿವಾದ, ಸಾಲಬಾಧೆ: ಬೆಂಗಳೂರಿನ ತಾಯಿ-ಮಗಳು ನರಸಾಪುರ ಕೆರೆಗೆ ಜಿಗಿದು ಆತ್ಮಹತ್ಯೆ
ಬೆಂಗಳೂರಿನ ತಾಯಿ-ಮಗಳು ನರಸಾಪುರ ಕೆರೆಗೆ ಜಿಗಿದು ಆತ್ಮಹತ್ಯೆ
ಸಾಧು ಶ್ರೀನಾಥ್​

Updated on: Mar 03, 2021 | 10:59 AM

ಕೋಲಾರ: ಆಸ್ತಿ ವಿವಾದ, ಸಾಲಬಾಧೆ ಹಿನ್ನೆಲೆಯಲ್ಲಿ ಬೆಂಗಳೂರಿನ ಹೊರಮಾವು ಮೂಲದ ತಾಯಿ ಮತ್ತು ಮಗಳು ಕೋಲಾರ ತಾಲೂಕಿನ ನರಸಾಪುರ ಕೆರೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ತಾಯಿ ನಂದಿತಾ (45) ಮತ್ತು ಪುತ್ರಿ ಪ್ರಗತಿ (21) ದುಪ್ಪಟ್ಟ ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಡೆತ್‌ನೋಟ್ ಬರೆದಿಟ್ಟು ತಾಯಿ, ಮಗಳು ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ರಿ ನಂದಿತಾ ಅವರು ಮೂರು ತಿಂಗಳ ಹಿಂದಷ್ಟೇ ಗಂಡನನ್ನು ಕಳೆದುಕೊಂಡಿದ್ದರು. ಗಂಡನ ಮನೆಯವರಿಂದ ಆಸ್ತಿ ವಿಚಾರವಾಗಿ ಕಿರುಕುಳಕ್ಕೆ‌ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us