ಮದ್ಯ ಸೇವನೆಗೆ ಹಣ ನೀಡದಿದ್ದಕ್ಕೆ ತಾಯಿಯನ್ನೇ ಕೊಂದ ಮಗ.. ನಾಪತ್ತೆಯಾಗಿದ್ದ ವೃದ್ದೆ ಶವ ನದಿಯಲ್ಲಿ ಪತ್ತೆ

ಮದ್ಯ ಕುಡಿಯಲು ಹಣ ನೀಡದಕ್ಕೆ ಹೆತ್ತ ಮಗನೇ ತಾಯಿಯನ್ನ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕಲ್ಲೂರು ಕೆ ಗ್ರಾಮದಲ್ಲಿ ನಡೆದಿದೆ.

ಮದ್ಯ ಸೇವನೆಗೆ ಹಣ ನೀಡದಿದ್ದಕ್ಕೆ ತಾಯಿಯನ್ನೇ ಕೊಂದ ಮಗ.. ನಾಪತ್ತೆಯಾಗಿದ್ದ ವೃದ್ದೆ ಶವ ನದಿಯಲ್ಲಿ ಪತ್ತೆ
ತಾಯಿಯನ್ನ ಕೊಂದ ಮಗ ಯಲ್ಲಪ್ಪ ಪೂಜಾರಿ
Follow us
ಪೃಥ್ವಿಶಂಕರ
|

Updated on:Mar 20, 2021 | 9:51 AM

ಕಲಬುರಗಿ: ಮದ್ಯ ಕುಡಿಯಲು ಹಣ ನೀಡದಕ್ಕೆ ಹೆತ್ತ ಮಗನೇ ತಾಯಿಯನ್ನ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕಲ್ಲೂರು ಕೆ ಗ್ರಾಮದಲ್ಲಿ ನಡೆದಿದೆ. ಭೀಮಬಾಯಿ ಪೂಜಾರಿ 75 ಕೊಲೆಯಾದ ವೃದ್ದೆಯಾಗಿದ್ದು, ಇಂದು ನಸುಕಿನ ಜಾವದಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಭೀಮಬಾಯಿ ಕಿರಿಯ ಪುತ್ರ ಯಲ್ಲಪ್ಪ ಪೂಜಾರಿಯಿಂದ ಈ ಕೃತ್ಯ ಎಸಗಲಾಗಿದ್ದು, ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ನದಿಯಲ್ಲಿ ವೃದ್ದೆ ಶವ ಪತ್ತೆ.. ಮೈಸೂರು: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ವೃದ್ದೆ ಶವ ನದಿಯ ಬದಿಯಲ್ಲಿ ಗೋಣಿಚೀಲದಲ್ಲಿ ಪತ್ತೆಯಾಗಿರುವ ಘಟನೆ ನಂಜನಗೂಡು ತಾಲೂಕು ಬಿಳಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು ತಾಲೂಕು ಕುಪ್ಪೇಗಾಲ ಗ್ರಾಮದ ನಿವಾಸಿ ಪುಟ್ಟಮ್ಮ(65) ಮೃತ ದುರ್ದೈವಿಯಾಗಿದ್ದು, ಯಾರೋ ಕೊಲೆ ಮಾಡಿರಬಹುದೆಂದು ಸಂಬಂಧಿಕರು ಶಂಕೆ ವ್ಯಕ್ತಪಡಿಸಿದ್ದಾರೆ.

ಫೋನ್ ಕರೆಯೊಂದು ಬಂದ ಹಿನ್ನೆಲೆಯಿಂದಾಗಿ ಮೂರು ದಿನಗಳ ಹಿಂದೆ ಪುಟ್ಟಮ್ಮ ಮನೆ ಬಿಟ್ಟಿದ್ದರು. ಪರಿಚಯಸ್ಥರಿಗೆ ನೀಡಿದ್ದ ಸಾಲವನ್ನು ವಸೂಲಿ ಮಾಡುವ ಸಲುವಾಗಿ ಪುಟ್ಟಮ್ಮ ತೆರಳಿದ್ದರು. ಆದರೆ ಮೂರು ದಿನಗಳ ನಂತರ ಗೋಣಿಚೀಲದಲ್ಲಿ ಪುಟ್ಟಮ್ಮನವರ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಬಿಳಿಗೆರೆ ಠಾಣಾ ಪೊಲೀಸರಿಂದ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆಯ ಮೃತ ದೇಹ ಪತ್ತೆ: ಪತಿಯ ವಿರುದ್ಧ ಕುಟುಂಬಸ್ಥರಿಂದ ಕೊಲೆ ಆರೋಪ

Published On - 9:51 am, Sat, 20 March 21

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್