ಇಬ್ಬರು ಮಕ್ಕಳನ್ನು ಕೊಂದು ತಾನೂ ನೇಣಿಗೆ ಶರಣಾದ ತಾಯಿ.. ಸಕ್ಕರೆ ನಾಡಿನಲ್ಲಿ ಹೃದಯ ವಿದ್ರಾವಕ ಘಟನೆ
ಸಕ್ಕರೆ ನಾಡಿನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಇಬ್ಬರು ಮಕ್ಕಳಿಗೆ ನೇಣು ಬಿಗಿದು ತಾಯಿ ನೇಣಿಗೆ ಶರಣಾಗಿದ್ದಾರೆ. ಜಿಲ್ಲೆಯ ಪಾಂಡವಪುರ ತಾಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮಂಡ್ಯ: ಸಕ್ಕರೆ ನಾಡಿನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಇಬ್ಬರು ಮಕ್ಕಳಿಗೆ ನೇಣು ಬಿಗಿದು ತಾಯಿ ನೇಣಿಗೆ ಶರಣಾಗಿದ್ದಾರೆ. ಜಿಲ್ಲೆಯ ಪಾಂಡವಪುರ ತಾಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮಕ್ಕಳಾದ ಗಾನವಿ(6) ಮತ್ತು ಉಲ್ಲಾಸ್ನನ್ನು(4) ತಾಯಿ ನೇಣು ಬಿಗಿದು ಹತ್ಯೆ ಮಾಡಿದ್ದಾರೆ. ಬಳಿಕ ತಾಯಿ ನಿವೇದಿತಾ(26) ತಾನೂ ನೇಣಿಗೆ ಶರಣಾಗಿದ್ದಾರೆ. 7 ವರ್ಷಗಳ ಹಿಂದೆ ಕೃಷ್ಣೇಗೌಡ ಎಂಬುವವನನ್ನು ನಿವೇದಿತಾ ವಿವಾಹವಾಗಿದ್ದರು. ಗಂಡ ಹೆಂಡತಿ ಇಬ್ಬರ ಮಧ್ಯೆ ಯಾವುದೇ ಸಮಸ್ಯೆ ಇರಲಿಲ್ಲ ಎಂದು ಹೇಳಲಾಗುತ್ತಿದೆ.
ಆದರೆ ನಿವೇದಿತಾ ಮಕ್ಕಳನ್ನೂ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ತನಿಖೆ ಬಳಿಕವೇ ಎಲ್ಲಾ ಅನುಮಾನಗಳಿಗೆ ಅಂತ್ಯವಾಗಲಿದೆ.