ಇಬ್ಬರು ಮಕ್ಕಳನ್ನು ಕೊಂದು ತಾನೂ ನೇಣಿಗೆ ಶರಣಾದ ತಾಯಿ.. ಸಕ್ಕರೆ ನಾಡಿನಲ್ಲಿ ಹೃದಯ ವಿದ್ರಾವಕ ಘಟನೆ

ಸಕ್ಕರೆ ನಾಡಿನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಇಬ್ಬರು ಮಕ್ಕಳಿಗೆ ನೇಣು ಬಿಗಿದು ತಾಯಿ ನೇಣಿಗೆ ಶರಣಾಗಿದ್ದಾರೆ. ಜಿಲ್ಲೆಯ ಪಾಂಡವಪುರ ತಾಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಇಬ್ಬರು ಮಕ್ಕಳನ್ನು ಕೊಂದು ತಾನೂ ನೇಣಿಗೆ ಶರಣಾದ ತಾಯಿ.. ಸಕ್ಕರೆ ನಾಡಿನಲ್ಲಿ ಹೃದಯ ವಿದ್ರಾವಕ ಘಟನೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು

Updated on: Dec 01, 2020 | 7:57 AM

ಮಂಡ್ಯ: ಸಕ್ಕರೆ ನಾಡಿನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಇಬ್ಬರು ಮಕ್ಕಳಿಗೆ ನೇಣು ಬಿಗಿದು ತಾಯಿ ನೇಣಿಗೆ ಶರಣಾಗಿದ್ದಾರೆ. ಜಿಲ್ಲೆಯ ಪಾಂಡವಪುರ ತಾಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಮಕ್ಕಳಾದ ಗಾನವಿ(6) ಮತ್ತು ಉಲ್ಲಾಸ್​ನನ್ನು(4) ತಾಯಿ ನೇಣು ಬಿಗಿದು ಹತ್ಯೆ ಮಾಡಿದ್ದಾರೆ. ಬಳಿಕ ತಾಯಿ ನಿವೇದಿತಾ(26) ತಾನೂ ನೇಣಿಗೆ ಶರಣಾಗಿದ್ದಾರೆ. 7 ವರ್ಷಗಳ ಹಿಂದೆ ಕೃಷ್ಣೇಗೌಡ ಎಂಬುವವನನ್ನು ನಿವೇದಿತಾ ವಿವಾಹವಾಗಿದ್ದರು. ಗಂಡ ಹೆಂಡತಿ ಇಬ್ಬರ ಮಧ್ಯೆ ಯಾವುದೇ ಸಮಸ್ಯೆ ಇರಲಿಲ್ಲ ಎಂದು ಹೇಳಲಾಗುತ್ತಿದೆ.

ಆದರೆ ನಿವೇದಿತಾ ಮಕ್ಕಳನ್ನೂ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ತನಿಖೆ ಬಳಿಕವೇ ಎಲ್ಲಾ ಅನುಮಾನಗಳಿಗೆ ಅಂತ್ಯವಾಗಲಿದೆ.

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us