ಆಟವಾಡ್ತಾ ಕ್ರಿಮಿನಾಶಕ ಸೇವಿಸಿ ಮಕ್ಕಳ ಸಾವು: ಗಂಡ ಬೈತಾನೆ ಅಂತಾ ತಾಯಿ ಆತ್ಮಹತ್ಯೆ ಯತ್ನ!

ಯಾದಗಿರಿ: ಮನೆಯಲ್ಲಿ ಆಟವಾಡುತ್ತಾ ಕ್ರಿಮಿನಾಶಕ ಕುಡಿದು ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ವಡಗೇರ ತಾಲೂಕಿನ ಕೊಡಾಲ್ ಗ್ರಾಮದಲ್ಲಿ ನಡೆದಿದೆ. 2 ವರ್ಷದ ಖೈರುನ್ ಹಾಗೂ 4 ತಿಂಗಳ ಮಗು ಅಪ್ಸಾನ ಮೃತ ದುರ್ದೈವಿಗಳು. ಮನೆಯಲ್ಲಿ ತಾಯಿ ಅಡುಗೆ ಮಾಡುತ್ತಿದ್ದ ವೇಳೆ ಮನೆಯಲ್ಲೇ ಮಕ್ಕಳು ಕ್ರಿಮಿನಾಶಕ ಸೇವಿಸಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಇಬ್ಬರು ಮಕ್ಕಳು ಸಾವಿಗೀಡಾಗಿದ್ದಾರೆ. ಮಕ್ಕಳ ಸಾವಿನ ಸುದ್ದಿ ಕೇಳಿ ತಾಯಿ ಶಹನಾಜ್ ಸಹ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಂಡ ಜಮೀನು ಕೆಲಸಕ್ಕೆ ಹೋದಾಗ ಈ ಘಟನೆ […]

ಆಟವಾಡ್ತಾ ಕ್ರಿಮಿನಾಶಕ ಸೇವಿಸಿ ಮಕ್ಕಳ ಸಾವು: ಗಂಡ ಬೈತಾನೆ ಅಂತಾ ತಾಯಿ ಆತ್ಮಹತ್ಯೆ ಯತ್ನ!
ಸಾಧು ಶ್ರೀನಾಥ್​

Updated on: Feb 26, 2020 | 10:24 AM

ಯಾದಗಿರಿ: ಮನೆಯಲ್ಲಿ ಆಟವಾಡುತ್ತಾ ಕ್ರಿಮಿನಾಶಕ ಕುಡಿದು ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ವಡಗೇರ ತಾಲೂಕಿನ ಕೊಡಾಲ್ ಗ್ರಾಮದಲ್ಲಿ ನಡೆದಿದೆ. 2 ವರ್ಷದ ಖೈರುನ್ ಹಾಗೂ 4 ತಿಂಗಳ ಮಗು ಅಪ್ಸಾನ ಮೃತ ದುರ್ದೈವಿಗಳು.

ಮನೆಯಲ್ಲಿ ತಾಯಿ ಅಡುಗೆ ಮಾಡುತ್ತಿದ್ದ ವೇಳೆ ಮನೆಯಲ್ಲೇ ಮಕ್ಕಳು ಕ್ರಿಮಿನಾಶಕ ಸೇವಿಸಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಇಬ್ಬರು ಮಕ್ಕಳು ಸಾವಿಗೀಡಾಗಿದ್ದಾರೆ. ಮಕ್ಕಳ ಸಾವಿನ ಸುದ್ದಿ ಕೇಳಿ ತಾಯಿ ಶಹನಾಜ್ ಸಹ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಗಂಡ ಜಮೀನು ಕೆಲಸಕ್ಕೆ ಹೋದಾಗ ಈ ಘಟನೆ ನಡೆದಿದ್ದು, ಮಕ್ಕಳು ಮೃತಪಟ್ಟಿರುವ ವಿಷಯ ಪತಿಗೆ ತಿಳಿದರೆ ಹೊಡೆಯಬಹುದು ಎಂದು ಹೆದರಿ ತಾನೂ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥ ಶಹನಾಜ್​ಗೆ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 7:53 am, Wed, 26 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us