ಕೌಟುಂಬಿಕ ಕಲಹ: ಇಬ್ಬರು ಹೆಣ್ಣುಮಕ್ಕಳ ಜೊತೆ ನಾಲೆಗೆ ಹಾರಿ ತಾಯಿ ಆತ್ಮಹತ್ಯೆ
ಶಿವಮೊಗ್ಗ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಭದ್ರಾವತಿ ತಾಲೂಕಿನ ಕೋಡಿಹಳ್ಳಿ ಸಮೀಪದ ಗೊಂದಿ ನಾಲೆಗೆ ಹಾರಿ ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಚಂದ್ರಕಲಾ(45), 8 ವರ್ಷದ ಶ್ವೇತಾ, 4 ವರ್ಷದ ರೋಹಿಣಿ(4) ಮೃತರು. ಮೃತರು ಭದ್ರಾವತಿಯ ನೆಹರು ನಗರ ಬಡಾವಣೆ ನಿವಾಸಿಗಳು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಇಬ್ಬರ ಹೆಣ್ಣು ಮಕ್ಕಳ ಜೊತೆ ನಾಲೆಗೆ ಹಾರಿ ಚಂದ್ರಕಲಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಲಿದೆ.
ಶಿವಮೊಗ್ಗ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಭದ್ರಾವತಿ ತಾಲೂಕಿನ ಕೋಡಿಹಳ್ಳಿ ಸಮೀಪದ ಗೊಂದಿ ನಾಲೆಗೆ ಹಾರಿ ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಚಂದ್ರಕಲಾ(45), 8 ವರ್ಷದ ಶ್ವೇತಾ, 4 ವರ್ಷದ ರೋಹಿಣಿ(4) ಮೃತರು.
ಮೃತರು ಭದ್ರಾವತಿಯ ನೆಹರು ನಗರ ಬಡಾವಣೆ ನಿವಾಸಿಗಳು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಇಬ್ಬರ ಹೆಣ್ಣು ಮಕ್ಕಳ ಜೊತೆ ನಾಲೆಗೆ ಹಾರಿ ಚಂದ್ರಕಲಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಲಿದೆ.