Kannada News Latest news 30 ಜನ ಪ್ರಯಾಣಿಸುತ್ತಿದ್ದ ವೋಲ್ವೋ ಬಸ್‌ನಲ್ಲಿ ಆಕಸ್ಮಿಕ ಬೆಂಕಿ, ಬಸ್ ರಸ್ತೆಯಲ್ಲೇ ಭಸ್ಮ
30 ಜನ ಪ್ರಯಾಣಿಸುತ್ತಿದ್ದ ವೋಲ್ವೋ ಬಸ್‌ನಲ್ಲಿ ಆಕಸ್ಮಿಕ ಬೆಂಕಿ, ಬಸ್ ರಸ್ತೆಯಲ್ಲೇ ಭಸ್ಮ
ಚಿತ್ರದುರ್ಗ: ಚಲಿಸುತ್ತಿದ್ದ ವೋಲ್ವೋ ಬಸ್‌ನಲ್ಲಿ ಆಕಸ್ಮಿಕ ಬೆಂಕಿ ಹತ್ತಿ ಸುಟ್ಟು ಭಸ್ಮವಾಗಿರುವ ಘಟನೆ ಹಿರಿಯೂರು ತಾಲೂಕಿನ ಗಿಡ್ಡೋಬನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಬೆಳಗಾವಿಯಿಂದ ಬೆಂಗಳೂರು ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ವೋಲ್ವೋ ಬಸ್ ಕ್ಷಣಾರ್ಧದಲ್ಲಿ ರಸ್ತೆಯಲ್ಲೇ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ವೋಲ್ವೋ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ. ಸುಮಾರು 30 ಜನರನ್ನು ರಕ್ಷಿಸಿದ್ದಾನೆ. ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Follow us on
ಚಿತ್ರದುರ್ಗ: ಚಲಿಸುತ್ತಿದ್ದ ವೋಲ್ವೋ ಬಸ್‌ನಲ್ಲಿ ಆಕಸ್ಮಿಕ ಬೆಂಕಿ ಹತ್ತಿ ಸುಟ್ಟು ಭಸ್ಮವಾಗಿರುವ ಘಟನೆ ಹಿರಿಯೂರು ತಾಲೂಕಿನ ಗಿಡ್ಡೋಬನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಬೆಳಗಾವಿಯಿಂದ ಬೆಂಗಳೂರು ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ವೋಲ್ವೋ ಬಸ್ ಕ್ಷಣಾರ್ಧದಲ್ಲಿ ರಸ್ತೆಯಲ್ಲೇ ಹೊತ್ತಿ ಉರಿದಿದೆ.
ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ವೋಲ್ವೋ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ. ಸುಮಾರು 30 ಜನರನ್ನು ರಕ್ಷಿಸಿದ್ದಾನೆ. ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.