AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಾಗರಿಕರಿಗಾಗಿ ‘ಕೊವಿಡ್ ರಕ್ಷಾ’ ಕಾಲ್ ಸೆಂಟರ್ ಆರಂಭಿಸಿದ ತೇಜಸ್ವಿ ಸೂರ್ಯ

ಭಾರತೀಯ ಜನತಾ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ತೇಜಸ್ವಿ ಸೂರ್ಯರವರು, ಹಿರಿಯ ನಾಗರಿಕರ ಲಸಿಕಾ ಅನುಕೂಲಕ್ಕಾಗಿ ಪಕ್ಷದ ಕಾರ್ಯಕರ್ತರು, ಸ್ವಯಂ ಸೇವಕರ ಸಹಾಯದೊಂದಿಗೆ ಆಸ್ಪತ್ರೆಯಲ್ಲಿ ಹೆಲ್ಪ್ ಡೆಸ್ಕ್ ಗಳನ್ನು ಆರಂಭಿಸುವಂತೆ ಸೂಚಿಸಿದ್ದಾರೆ.

ಹಿರಿಯ ನಾಗರಿಕರಿಗಾಗಿ ‘ಕೊವಿಡ್ ರಕ್ಷಾ’ ಕಾಲ್ ಸೆಂಟರ್ ಆರಂಭಿಸಿದ ತೇಜಸ್ವಿ ಸೂರ್ಯ
ವೈದ್ಯರು ಮತ್ತು ಸ್ವಯಂ ಸೇವಕರೊಂದಿಗೆ ತೇಜಸ್ವೀ ಸೂರ್ಯ
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on:Mar 13, 2021 | 7:33 PM

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಕೋವಿಡ್ -19 ಲಸಿಕಾ ಅಭಿಯಾನವನ್ನು ಯಶಸ್ವೀಯಾಗಿ ಜಾರಿಗೊಳಿಸಲು, ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ, ‘ಕೊವಿಡ್ ರಕ್ಷಾ’ ವೇದಿಕೆ ಆರಂಭಿಸಿದ್ದಾರೆ. ಸಹಾಯವಾಣಿ 080 6191 4960 ಸಂಖ್ಯೆಗೆ ಕರೆ ಮಾಡಿದಲ್ಲಿ ಹತ್ತಿರದ ಆಸ್ಪತ್ರೆ / ಕೇಂದ್ರದಲ್ಲಿ ಹಿರಿಯ ನಾಗರಿಕರ ಲಸಿಕಾ ನೋಂದಣಿಗೆ ಸಹಾಯ, ತಜ್ಞ ವೈದ್ಯರಿಂದ ಸಮಾಲೋಚನೆಗೆ ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರು ದಕ್ಷಿಣ ಸಂಸದರ ಕಚೇರಿಯು ಇತರ ಸ್ವಯಂಸೇವಕರ ತಂಡದೊಂದಿಗೆ ‘ಕೊವಿಡ್ ರಕ್ಷಾ’ ವೇದಿಕೆಯ ಮೂಲಕ ಕಾಲ್ ಸೆಂಟರ್ ಅನ್ನು ಪ್ರಾರಂಭಿಸಿದ್ದು, ಈ ಸಹಾಯವಾಣಿಗೆ ಬರುವ ಕರೆಗಳ ಆಧಾರದಲ್ಲಿ ಲಸಿಕಾ ನೋಂದಣಿ ಕಾರ್ಯ ನಡೆಸಲಿದೆ. ಇದರನ್ವಯ, ಹಿರಿಯ ನಾಗರಿಕರಿಗೆ ಹತ್ತಿರದ ಆಸ್ಪತ್ರೆ/ಕೇಂದ್ರದಲ್ಲಿ ಲಸಿಕಾ ನೋಂದಣಿ, ಅಸ್ವಸ್ಥ ನಾಗರಿಕರಿಗೆ ಸಾರಿಗೆ ವ್ಯವಸ್ಥೆ ಹಾಗೂ ಲಸಿಕೆ ಪಡೆದುಕೊಂಡ ನಂತರ ತಜ್ಞ ವೈದ್ಯರಿಂದ ಸಲಹೆ, ಸಮಾಲೋಚನೆಗೆ ಕ್ರಮ ಕೈಗೊಳ್ಳಲಾಗಿದೆ.

‘ಕೊವಿಡ್ ರಕ್ಷಾ’ ಕುರಿತು ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ” ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವತಿಯಿಂದ ಆರಂಭವಾಗಿರುವ ವಿಶ್ವದ ಅತಿ ದೊಡ್ಡ ಲಸಿಕಾ ಅಭಿಯಾನದ ಅನ್ವಯ ಈಗಾಗಲೇ 50 ಲಕ್ಷಕ್ಕೂ ಅಧಿಕ ನಾಗರಿಕರು ಕೆಲವೇ ದಿನಗಳಲ್ಲಿ ಲಸಿಕೆ ಪಡೆದುಕೊಂಡಿದ್ದು, ಬೆಂಗಳೂರು ದಕ್ಷಿಣ ವ್ಯಾಪ್ತಿಯಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಲಸಿಕೆ ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಈ ವೇದಿಕೆ ಆರಂಭಿಸಲಾಗಿದೆ. ಕೋವಿನ್ ಅರ್ಜಿ ಅಥವಾ ಆರೋಗ್ಯ ಸೇತು ಜಾಲತಾಣದಮೂಲಕ ನೋಂದಣಿ ಮಾಡಿಕೊಳ್ಳಲು ಇದರಿಂದ ಸಹಾಯ ಒದಗಿಸಲಿದ್ದು, ಲಸಿಕೆ ಪಡೆದುಕೊಂಡ ನಂತರವೂ ತಜ್ಞ ವೈದ್ಯರೊಂದಿಗೆ ಸಮಾಲೋಚನೆ ನಡೆಸಲು ವ್ಯವಸ್ಥೆ ಮಾಡಲಾಗಿದೆ” ಎಂದು ತಿಳಿಸಿದರು.

MP Teajasvi-Surya monitoring vaccination programme

ಲಸಿಕಾ ಅಭಿಯಾನವನ್ನು ಮಾನಿಟರ್​ ಮಾಡುತ್ತಿರುವ ಸಂಸದ ತೇಜಸ್ವೀ ಸುರ್ಯ

ಭಾರತೀಯ ಜನತಾ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ತೇಜಸ್ವಿ ಸೂರ್ಯ , ಹಿರಿಯ ನಾಗರಿಕರ ಲಸಿಕಾ ಅನುಕೂಲಕ್ಕಾಗಿ ಪಕ್ಷದ ಕಾರ್ಯಕರ್ತರು, ಸ್ವಯಂ ಸೇವಕರ ಸಹಾಯದೊಂದಿಗೆ ಆಸ್ಪತ್ರೆಯಲ್ಲಿ ಹೆಲ್ಪ್ ಡೆಸ್ಕ್ ಗಳನ್ನು ಆರಂಭಿಸುವಂತೆ ಸೂಚಿಸಿದ್ದಾರೆ. ಸದ್ಯದಲ್ಲೇ ಎಲ್ಲ ಆಸ್ಪತ್ರೆ/ ಪಾರ್ಕ್​​ಗಳ ಹತ್ತಿರವೂ ನೋಂದಣಿ ಡೆಸ್ಕ್ ಆರಂಭಿಸಲಿರುವ ಕುರಿತು ಇದೇ ಸಂದರ್ಭದಲ್ಲಿ ಸಂಸದರು ವಿವರಿಸಿದರು.

‘ಕೋವಿಡ್ ರಕ್ಷಾ’ ವೇದಿಕೆಯನ್ನು 100ಕ್ಕೂ ಅಧಿಕ ವೈದ್ಯರ ಹಾಗೂ 200ಕ್ಕೂ ಅಧಿಕ ಸ್ವಯಂಸೇವಕರ ತಂಡದೊಂದಿಗೆ ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಹಾಗೂ ನಂತರದ ಅವಧಿಯಲ್ಲಿ ನಾಗರಿಕರ ಅನುಕೂಲಕ್ಕಾಗಿ ಆರಂಭಿಸಲಾಗಿತ್ತು.

MP Tejasvi Surya

ಸಂಸದ ತೇಜಸ್ವಿ ಅವರ ಸಹಾಯ ವಾಣಿ

ಮೊದಲ ಹಂತದ ಕಾರ್ಯಾಚರಣೆಯಲ್ಲಿ ‘ಕೊವಿಡ್ ರಕ್ಷಾ’ ವೇದಿಕೆಯ ಮೂಲಕ 10,700 ಕರೆಗಳಿಗೆ ಉತ್ತರಿಸಿದ್ದು, 3,465 ಸಮಾಲೋಚನೆಗಳನ್ನು ವಾಟ್ಸಾಪ್ ಮುಖಾಂತರ ನಿರ್ವಹಿಸಲಾಗಿದೆ. 582 ಜನರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಕಾರ್ಯ, 96 ಕೇಸ್ ಗಳ ತುರ್ತುಪರಿಹಾರ ಕಾರ್ಯವನ್ನು ಮಾಡಲಾಗಿದೆ. ಟೆಲಿ ಸಮಾಲೋಚನೆ ಮೂಲಕ 1,698 ಜನ ಕೋವಿಡ್ -19 ಗುಣಲಕ್ಷಣಗಳನ್ನು ಹೊಂದಿರುವ ನಾಗರಿಕರ ಪರಾಮರ್ಶೆ ನಡೆಸಲಾಗಿದೆ ಎಂದು ಬೆಂಗಳೂರು ದಕ್ಷಿಣ ಸಂಸದರ ಕಚೇರಿ ಪ್ರಕಟಣೆ ತಿಳಿಸುತ್ತದೆ.

ಇದನ್ನೂ ಓದಿ: AstraZeneca Side Effects: ಆಸ್ಟ್ರಾಜೆನಿಕಾ ಲಸಿಕೆಯ ಅಡ್ಡಪರಿಣಾಮಗಳನ್ನು ಪರಿಶೀಲನೆ ನಡೆಸಲು ನಿರ್ಧರಿಸಿದ ಭಾರತ

Published On - 7:26 pm, Sat, 13 March 21

ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ