ಬೆಳ್ಳಂಬೆಳಗ್ಗೆ ಮುಳುಬಾಗಿಲು ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿಯ ಭೀಕರ ಹತ್ಯೆ
ಮೋಹನ್ ಮುತ್ಯಾಲಪೇಟೆಯಲ್ಲಿರುವ ದೇವಸ್ಥಾನಕ್ಕೆ ಹೋಗುವಾಗ ಹಲ್ಲೆ ನಡೆದಿದೆ. ಅವರನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗುವ ಪ್ರಯತ್ನ ನಡೆಯಿತಾದರೂ ಮಾರ್ಗ ಮಧ್ಯೆದಲ್ಲೇ ಕೊನೆಯುಸಿರೆಳೆದಿದ್ದಾರೆ.
Kolar: ರಕ್ತ ರಾಜಕಾರಣವನ್ನು ಬಿಂಬಿಸುವ ಮತ್ತೊಂದು ದಾರುಣ ಮತ್ತು ಭೀಕರ ಘಟನೆ ಮಂಗಳವಾರ ಬೆಳ್ಳಂಬೆಳಗ್ಗೆ ಕೋಲಾರ ಜಿಲ್ಲೆಯ ಮುಳುಬಾಗಿಲು (Mulbagal) ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ (Jagan mohan Reddy) ಅವರನ್ನು ಅಪರಿಚಿತ ಹಂತಕರ ಗುಂಪೊಂದು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹಲ್ಲೆ ನಡೆಸಿದೆ. ಮೋಹನ್ ಮುತ್ಯಾಲಪೇಟೆಯಲ್ಲಿರುವ (Muthyalpet) ದೇವಸ್ಥಾನಕ್ಕೆ ಹೋಗುವಾಗ ಹಲ್ಲೆ ನಡೆದಿದೆ. ಅವರನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗುವ ಪ್ರಯತ್ನ ನಡೆಯಿತಾದರೂ ಮಾರ್ಗ ಮಧ್ಯೆದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮೃತ ಮೋಹನ್, ಮಾಜಿ ಶಾಸಕ ಕೊತ್ತನೂರು ಮಂಜುನಾಥ ಅವರ ಬೆಂಬಲಿಗರಾಗಿದ್ದರು. ಮುಳಬಾಗಿಲು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos