Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುರಸಭೆ ಮುಖ್ಯಾಧಿಕಾರಿಯ ಮಾನಸಿಕ ಕಿರುಕುಳಕ್ಕೆ ಬೇಸತ್ತು ಆರೋಗ್ಯಾಧಿಕಾರಿ ಆತ್ಮಹತ್ಯೆಗೆ ಯತ್ನ..

ಪುರಸಭೆ ಕಚೇರಿ ಸಿಬ್ಬಂದಿಯಾದ ಇಕ್ಬಾಲ್ ವಿರುದ್ಧವೂ ಆರೋಪ ಕೇಳಿಬಂದಿದ್ದು, ಡೆತ್ ನೋಟ್​ನಲ್ಲಿ ತಿಳಿಸಿದ್ದಾರೆ. ಸದ್ಯಕ್ಕೆ ಅಸ್ವಸ್ಥರಾದ ರವಿಕೃಷ್ಣ ಪುಣಚಗೆ ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪುರಸಭೆ ಮುಖ್ಯಾಧಿಕಾರಿಯ ಮಾನಸಿಕ ಕಿರುಕುಳಕ್ಕೆ ಬೇಸತ್ತು ಆರೋಗ್ಯಾಧಿಕಾರಿ ಆತ್ಮಹತ್ಯೆಗೆ ಯತ್ನ..
ಪುರಾಸಭಾ ಕಚೇರಿ ಬಂಟ್ವಾಳ, ಪುರಸಭೆಯ ಮುಖ್ಯಾಧಿಕಾರಿ ಲೀನಾ ಬ್ರುಟ್ಟೋ
Follow us
sandhya thejappa
| Updated By: ಸಾಧು ಶ್ರೀನಾಥ್​

Updated on: Dec 11, 2020 | 11:05 AM

ದಕ್ಷಿಣ ಕನ್ನಡ: ಜಿಲ್ಲೆಯ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಲೀನಾ ಬ್ರುಟ್ಟೋ ವಿರುದ್ಧ ಮಾನಸಿಕ ಕಿರುಕುಳ ನೀಡುತ್ತಾರೆಂದು ಆರೋಪಿಸಿ ಪುರಸಭೆ ಆರೋಗ್ಯಾಧಿಕಾರಿ ರವಿಕೃಷ್ಣ ಪುಣಚ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಪುರಸಭೆ ಕಚೇರಿ ಸಿಬ್ಬಂದಿಯಾದ ಇಕ್ಬಾಲ್ ವಿರುದ್ಧವೂ ಆರೋಪ ಕೇಳಿಬಂದಿದ್ದು, ಡೆತ್ ನೋಟ್​ನಲ್ಲಿ ತಿಳಿಸಿದ್ದಾರೆ. ಸದ್ಯಕ್ಕೆ ಅಸ್ವಸ್ಥರಾಗಿರುವ ರವಿಕೃಷ್ಣ ಪುಣಚಗೆ ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮುಖ್ಯಾಧಿಕಾರಿ ದಿನನಿತ್ಯ ಅನಗತ್ಯವಾಗಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಕಚೇರಿಯ ಸಿಬ್ಬಂದಿ ಇಕ್ಬಾಲ್ ನನ್ನ ಬಗ್ಗೆ ಅನಗತ್ಯ ಸುಳ್ಳು ಸುದ್ಧಿ ಹಬ್ಬಿಸುತ್ತಿದ್ದಾನೆ ಎಂದು ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ. ಬಂಟ್ವಾಳ ಪುರಸಭೆಗೆ ಕಳೆದ 5 ತಿಂಗಳ ಹಿಂದೆ ಕರ್ತವ್ಯಕ್ಕೆ ಹಾಜರಾಗಿದ್ದು, 2 ತಿಂಗಳು ಯಾವುದೇ ಸಮಸ್ಯೆ ಇರಲಿಲ್ಲ. ತದನಂತರ ನಿರಂತರವಾಗಿ ಅನಗತ್ಯ ಬೈಗುಳ, ಕಿರುಕುಳ ನೀಡುತ್ತಿದ್ದಾರೆ ಎಂದಿದ್ದಾರೆ.

ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪ್ರಕರಣ: ತೀರ್ಥಹಳ್ಳಿ ಮೂಲದ ಶಂಕಿತ ಅರೆಸ್ಟ್