KGF: ಕೊಲೆ ಆರೋಪಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ.. ಬರ್ಬರ ಹತ್ಯೆ
ಕೋಲಾರ: ಅಪರಿಚಿತ ವ್ಯಕ್ತಿಗಳಿಂದ ಹಲ್ಲೆಗೊಳಗಾದ ಕೊಲೆ ಆರೋಪಿಯೊಬ್ಬ ಸಾವನ್ನಪ್ಪಿರೋ ಘಟನೆ ಜಿಲ್ಲೆಯ KGF ನಗರದ ಮಸ್ಕಂ ಬಳಿ ನಿನ್ನೆ ರಾತ್ರಿ ನಡೆದಿದೆ. ಮೃತ ಕೊಲೆ ಆರೋಪಿ ಸ್ಟಾಲಿನ್(22) ಎಂದು ತಿಳಿದುಬಂದಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಸ್ಕಂ ಬಳಿ ಸ್ಟಾಲಿನ್ ತೆರಳುತ್ತಿದ್ದ ವೇಳೆ ಅಪರಿಚಿತರು ಹಿಂಬದಿಯಿಂದ ಬಂದು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗ್ತಿದೆ. ಗಂಭೀರವಾಗಿ ಗಾಯಗೊಂಡಿದ್ದ ಸ್ಟಾಲಿನ್ನನ್ನ ಕೂಡಲೇ ಸ್ಥಳೀಯರು ಕೋಲಾರದ ಆಸ್ಪತ್ರೆಗೆ ದಾಖಲು ಮಾಡಿದ್ರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ […]
ಕೋಲಾರ: ಅಪರಿಚಿತ ವ್ಯಕ್ತಿಗಳಿಂದ ಹಲ್ಲೆಗೊಳಗಾದ ಕೊಲೆ ಆರೋಪಿಯೊಬ್ಬ ಸಾವನ್ನಪ್ಪಿರೋ ಘಟನೆ ಜಿಲ್ಲೆಯ KGF ನಗರದ ಮಸ್ಕಂ ಬಳಿ ನಿನ್ನೆ ರಾತ್ರಿ ನಡೆದಿದೆ. ಮೃತ ಕೊಲೆ ಆರೋಪಿ ಸ್ಟಾಲಿನ್(22) ಎಂದು ತಿಳಿದುಬಂದಿದೆ.
ಹಳೇ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಸ್ಕಂ ಬಳಿ ಸ್ಟಾಲಿನ್ ತೆರಳುತ್ತಿದ್ದ ವೇಳೆ ಅಪರಿಚಿತರು ಹಿಂಬದಿಯಿಂದ ಬಂದು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗ್ತಿದೆ. ಗಂಭೀರವಾಗಿ ಗಾಯಗೊಂಡಿದ್ದ ಸ್ಟಾಲಿನ್ನನ್ನ ಕೂಡಲೇ ಸ್ಥಳೀಯರು ಕೋಲಾರದ ಆಸ್ಪತ್ರೆಗೆ ದಾಖಲು ಮಾಡಿದ್ರು.
ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸ್ಟಾಲಿನ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾನೆ. ಇದೀಗ, ಆ್ಯಂಡರ್‌ಸನ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಹಲ್ಲೆ ಮಾಡಿದ ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ ನಡೆಸುತ್ತಿದ್ದಾರೆ.