ಕಾರವಾರ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆಯಂತೆ. ಹೀಗಾಗಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲು ನಿರ್ಧರಿಸಿದ್ದಾರೆ.
ವಾಟ್ಸಾಪ್ ಗ್ರೂಪ್‌ವೊಂದರಲ್ಲಿ ವ್ಯಕ್ತಿಯೊಬ್ಬರು ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಅಕ್ರಮ ಗೋ ಸಾಗಾಟ ನಡೆಸುವವರನ್ನು ಪೊಲೀಸರಿಗೆ ಒಪ್ಪಿಸಬೇಕು, ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಳಬಾರದು.
ಅಲ್ಲದೆ ಜಾನುವಾರು ಸಾಗಾಟ ಮಾಡುವ ವಾಹನದ ಹಾಗೂ ಜನರ ಮೇಲೆ ಹಲ್ಲೆ ನಡೆಸಿದರೆ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದೂ ಎಚ್ಚರಿಸಿದ್ದರು. ಹೀಗಾಗಿ ಜಿಲ್ಲಾಧಿಕಾರಿಯವರ ಹೇಳಿಕೆಯ ಸುದ್ದಿಯನ್ನು ಉಲ್ಲೇಖಿಸಿ ವಾಟ್ಸಾಪ್ ಗ್ರೂಪಲ್ಲಿ ಚರ್ಚೆಯಾಗಿದೆ. ಈ ವೇಳೆ ತುಳುವಿನಲ್ಲಿ ಹತ್ಯೆಯ ಬೆದರಿಕೆ ಹಾಕಿದ್ದಾರೆ.