
ಕಾರವಾರ: ಕೊರೊನಾ ಸೋಂಕಿಗೆ ಒಳಗಾಗಿರುವ ರಾಜ್ಯದ ಹಾಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಗ ಗುಣಮುಖರಾಗಲಿ ಎಂದು ಶಿರಸಿಯಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ.
ಹೌದು ಉತ್ತರ ಕನ್ನಡ ಜಿಲ್ಲೆ ಶಿರಸಿ ಪಟ್ಟಣದ ದರ್ಗಾದಲ್ಲಿ ಸ್ಥಳೀಯ ಮುಸ್ಲಿಂ ಧರ್ಮೀಯರು ಮುಖ್ಯಮಂತ್ರಿ ಬಿಎಸ್‌ವೈ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೊರೊನಾದಿಂದ ಬೇಗ ಗುಣಮುಖರಾಗಲಿ ಎಂದು ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ.
ಈ ಪಾರ್ಥನೆಯಲ್ಲಿ ನೂರಾರು ಮುಸ್ಲಿಂ ಬಾಂಧವರು ಪಾಲ್ಗೊಂಡಿದ್ದರು. ರಾಜ್ಯದಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಗುಣಮುಖರಾಗಲೆಂದು ಪ್ರಾರ್ಥನೆ ಮಾಡಿದ್ದಾಗಿ ಪಾಲ್ಗೊಂಡವರು ತಿಳಿಸಿದ್ದಾರೆ.