ಧುಮ್ಮಿಕ್ಕಿ ಹರಿಯುತಿದೆ ಮುತ್ಯಾಲಮಡು‌ವು ಜಲಪಾತ.. ಬೆಂಗಳೂರಿಗರನ್ನು ಕೈಬೀಸಿ ಕರೆಯುತಿದೆ!

ಬೆಂಗಳೂರು: ಆನೇಕಲ್ ಸುತ್ತಮುತ್ತ ಉತ್ತಮ ವರ್ಷಧಾರೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗರ ನೆಚ್ಚಿನ ಪ್ರವಾಸಿ ತಾಣವಾದ ಮುತ್ಯಾಲಮಡು‌ವು ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಈ ಜಲಪಾತ ಬೆಂಗಳೂರಿನಿಂದ ಸುಮಾರು 40 ಕಿ.ಮೀ ದೂರದಲ್ಲಿದೆ. ಭೋರ್ಗರೆದು ಹರಿಯುತ್ತಿರುವ ಮುತ್ಯಾಲಮಡು‌ವು ಜಲಪಾತವನ್ನು ವೀಕ್ಷಿಸಲು ಪ್ರವಾಸಿಗರ ದಂಡು ಆಗಮಿಸುತ್ತಿದೆ. ಸುಮಾರು 30 ಅಡಿ ಎತ್ತರದಿಂದ ಧುಮ್ಮಿಕ್ಕಿ ಹರಿಯುತ್ತಿರುವ ಮುತ್ಯಾಲಮಡು ಜಲಪಾತದ ಮನಮೋಹಕ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ತಂಡೋಪತಂಡವಾಗಿ ಬರುತ್ತಿದ್ದಾರೆ.

ಧುಮ್ಮಿಕ್ಕಿ ಹರಿಯುತಿದೆ ಮುತ್ಯಾಲಮಡು‌ವು ಜಲಪಾತ.. ಬೆಂಗಳೂರಿಗರನ್ನು ಕೈಬೀಸಿ ಕರೆಯುತಿದೆ!

Updated on: Oct 21, 2020 | 1:09 PM

ಬೆಂಗಳೂರು: ಆನೇಕಲ್ ಸುತ್ತಮುತ್ತ ಉತ್ತಮ ವರ್ಷಧಾರೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗರ ನೆಚ್ಚಿನ ಪ್ರವಾಸಿ ತಾಣವಾದ ಮುತ್ಯಾಲಮಡು‌ವು ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಈ ಜಲಪಾತ ಬೆಂಗಳೂರಿನಿಂದ ಸುಮಾರು 40 ಕಿ.ಮೀ ದೂರದಲ್ಲಿದೆ.
ಭೋರ್ಗರೆದು ಹರಿಯುತ್ತಿರುವ ಮುತ್ಯಾಲಮಡು‌ವು ಜಲಪಾತವನ್ನು ವೀಕ್ಷಿಸಲು ಪ್ರವಾಸಿಗರ ದಂಡು ಆಗಮಿಸುತ್ತಿದೆ. ಸುಮಾರು 30 ಅಡಿ ಎತ್ತರದಿಂದ ಧುಮ್ಮಿಕ್ಕಿ ಹರಿಯುತ್ತಿರುವ ಮುತ್ಯಾಲಮಡು ಜಲಪಾತದ ಮನಮೋಹಕ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ತಂಡೋಪತಂಡವಾಗಿ ಬರುತ್ತಿದ್ದಾರೆ.

Published On - 1:05 pm, Wed, 21 October 20