ಶ್ರೀರಾಮ ಮಂದಿರ ಪಕ್ಕದಲ್ಲಿಯೇ ಕರ್ನಾಟಕ ಯಾತ್ರಿ ನಿವಾಸ ಕಟ್ಟುತ್ತಾ ರಾಜ್ಯ ಸರ್ಕಾರ?
ಅಯೋಧ್ಯಾ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಾಳೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಇದಕ್ಕಾಗಿ ಭರ್ಜರಿ ಸಿದ್ದತೆ ನಡೆದಿದೆ. ಈ ನಡುವೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಹೋಗುವ ಕರ್ನಾಟಕದ ಭಕ್ತರಿಗಾಗಿ ಅಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಿಸಲು ಕರ್ನಾಟಕದ ಮುಜರಾಯಿ ಇಲಾಖೆ ಮುಂದಾಗಿದೆ. ಈ ಸಂಬಂಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದು ಕರ್ನಾಟಕದ ಯಾತ್ರಿ ನಿವಾಸಕ್ಕೆ ಜಮೀನು ಕೇಳುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ […]

ಅಯೋಧ್ಯಾ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಾಳೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಇದಕ್ಕಾಗಿ ಭರ್ಜರಿ ಸಿದ್ದತೆ ನಡೆದಿದೆ. ಈ ನಡುವೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಹೋಗುವ ಕರ್ನಾಟಕದ ಭಕ್ತರಿಗಾಗಿ ಅಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಿಸಲು ಕರ್ನಾಟಕದ ಮುಜರಾಯಿ ಇಲಾಖೆ ಮುಂದಾಗಿದೆ.
ಈ ಸಂಬಂಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದು ಕರ್ನಾಟಕದ ಯಾತ್ರಿ ನಿವಾಸಕ್ಕೆ ಜಮೀನು ಕೇಳುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪತ್ರ ಬರೆದಿದ್ದಾರೆ.
ಕರ್ನಾಟಕದಿಂದ ಅಯೋಧ್ಯೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಯಾತ್ರಿ ನಿವಾಸ ನಿರ್ಮಿಸಲು ಕನಿಷ್ಠ ೩ ರಿಂದ ೫ ಎಕರೆ ಭೂಮಿ ಮೀಸಲಿಡಲು ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡುವಂತೆ ಸಿಎಂ ಯಡಿಯೂರಪ್ಪಗೆ ಕೋಟ ಶ್ರೀನಿವಾಸ ಪೂಜಾರಿ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಒಂದು ವೇಳೆ ಯೋಗಿ ಆದಿತ್ಯನಾಥ್ ಕರ್ನಾಟಕ ಸರ್ಕಾರದ ಮನವಿಗೆ ಒಪ್ಪಿದರೆ ಶ್ರೀರಾಮ ಮಂದಿರದ ಆಸುಪಾಸಿನಲ್ಲಿಯೇ ಸುಸಜ್ಜಿತ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣವಾಗಲಿದೆ. ಇದಕ್ಕಾಗಿ ಕರ್ನಾಟಕದ ದಾರ್ಮಿಕ ದತ್ತಿ ಇಲಾಖೆ ತಯಾರಿ ಆರಂಭಿಸಿದೆ.



