
ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಗಲಾಟೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತಾವು ನೀಡಿದ ಹೇಳಿಕೆಯನ್ನು ತಿರುಚುವ ಪ್ರಯತ್ನ ಮಾಡಲಾಗಿದೆ ಎಂದು ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ.
“ಮುಸ್ಲಿಂ ಮತ್ತು ಹಿಂದೂ ಮುಖಂಡರು ಶಾಂತಿ ಕಾಯ್ದುಕೊಳ್ಳಲು ಪ್ರಯತ್ನಿಸಬೇಕೆಂದು ನಾನು ಹೇಳಿದ್ದನ್ನು ಹಿಂದೂ–ವಿರೋಧಿ ಎಂಬಂತೆ ಚಿತ್ರಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ದೊಂಬಿ ನಡೆಸುವ ಮುಸ್ಲಿಮರಿಗೆ ಆ ಸಮುದಾಯದ ನಾಯಕರು ತಿಳಿ ಹೇಳಬೇಕು. ಹಾಗೆಯೇ, ಹಿಂದೂ ಮುಖಂಡರು ನವೀನ್ನಂಥ ಹಿಂದೂಗಳಿಗೆ ದ್ವೇಷಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡದಂತೆ ತಡೆಯಬೇಕು ಎಂದಿದ್ದೇನೆ. ಇದರಲ್ಲಿ ತಪ್ಪೇನಿದೆ?” ಅಂತ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಪರಿಸ್ಥಿತಿಯ ಸೂಕ್ಷ್ಮತೆಯನ್ನು ಅರ್ಥಮಾಡಿಕೊಳ್ಳದೆ, ಪ್ರಮುಖ ಪಕ್ಷಗಳ ನಾಯಕರು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿರುವುದನ್ನು ಗಮನಿಸುತ್ತಿದ್ದರೆ ಇವರಿಗೆ ರಾಜ್ಯ ಮತ್ತು ಜನತೆಯ ಬಗ್ಗೆ ಕಾಳಜಿಯೆಷ್ಟಿದೆ ಎನ್ನುವುದು ಗೊತ್ತಾಗುತ್ತದೆ ಅಂತ ಜನ ಮಾತಾಡಿಕೊಳ್ಳುತ್ತಿದ್ದಾರೆ.