Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಗ್ಗೆ ಆದೇಶ ಹಿಂಪಡೆದ ಮೈಸೂರು ಡಿಸಿ ರೋಹಿಣಿ ಸಿಂಧೂರಿ

ಈ ಹಿಂದೆ ಕೊರೊನಾ ಬಗ್ಗೆ ಆದೇಶ ಹೊರಡಿಸಿದ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಈಗ ಸರ್ಕಾರಕ್ಕೆ ಸುತ್ತೋಲೆ ಹೊರಡಿಸಿದ ಬೆನ್ನಲ್ಲೇ ತಮ್ಮ ಆದೇಶವನ್ನು ಹಿಂಪಡೆದಿದ್ದಾರೆ.

ಕೊರೊನಾ ಬಗ್ಗೆ ಆದೇಶ ಹಿಂಪಡೆದ ಮೈಸೂರು ಡಿಸಿ ರೋಹಿಣಿ ಸಿಂಧೂರಿ
ರೋಹಿಣಿ ಸಿಂಧೂರಿ
Follow us
shruti hegde
| Updated By: preethi shettigar

Updated on:Apr 10, 2021 | 9:12 AM

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ನಿಯಮ ಜಾರಿಗೊಳಿಸಲಾಗಿತ್ತು. ಈ ಕುರಿತಾಗಿ ಸರ್ಕಾರಕ್ಕೆ ಸುತ್ತೋಲೆ ಹೊರಡಿಸಿದ ಬೆನ್ನಲ್ಲೇ ತಮ್ಮ ಆದೇಶವನ್ನು ಮೈಸೂರಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಿಂಪಡೆದಿದ್ದಾರೆ. ಬೆಂಗಳೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ಭೇಟಿ ನೀಡುವ ಜನರು ಕೊವಿಡ್ 19 ನೆಗೆಟಿವ್ ವರದಿ ಹೊಂದಿರಲು ಸಲಹಾ ಸೂಚನೆ ನೀಡಲಾಗಿತ್ತು. ಈ ಕುರಿತಾಗಿ ಸಾರ್ವಜನಿಕರಲ್ಲಿ ಸಲಹಾ ಸೂಚನೆ ಬಗ್ಗೆ ಗೊಂದಲ ಉಂಟಾಗಿದೆ. ಅಲ್ಲದೆ ಸರ್ಕಾರದ ಸುತ್ತೋಲೆಯಲ್ಲಿ ಕೊವಿಡ್ 19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತ್ಯೇಕ ಆದೇಶಗಳನ್ನು ಹೊರಡಿಸದಂತೆ ಹೇಳಿದೆ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈಗಾಗಲೇ ಇಂತಹ ಆದೇಶ ಸೂಚನೆ ಹೊರಡಿಸಿದ್ದಲ್ಲಿ ತಕ್ಷಣವೇ ಹಿಂಪಡೆಯಲು ನಿರ್ದೇಶಿಸಿದೆ. ಆದ್ದರಿಂದ ಹೊರಡಿಸಲಾಗಿರುವ ಸಲಹಾ ಸೂಚನೆಯನ್ನು ತಕ್ಷಣದಿಂದ ಹಿಂಪಡೆಯಲಾಗಿದೆ. ಸರ್ಕಾರದ ಸಲಹಾ ಸೂಚನೆಯನ್ನು ಜಾರಿಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಕೋರಿ ಪತ್ರ ಬರೆಯಲಾಗಿರುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಬೆಂಗಳೂರಿನಿಂದ ಮೈಸೂರಿಗೆ ಬರುವವರು ಕೊವಿಡ್ ಟೆಸ್ಟ್ ವರದಿ ತಂದರೆ ಒಳ್ಳೆಯದು. ಬೆಂಗಳೂರಿನಲ್ಲಿ 5 ಸಾವಿರ ಪ್ರಕರಣಗಳು ದಾಖಲಾಗುತ್ತಿದೆ. ಮೈಸೂರಿಗೆ ಬೆಂಗಳೂರಿನಿಂದ ಸಾವಿರಾರು ಜನರು ಮೈಸೂರಿಗೆ ಬರುತ್ತಿದ್ದಾರೆ. ಮೈಸೂರಿನ ಹಿತದೃಷ್ಟಿಯಿಂದ ನೆಗೆಟಿವ್ ವರದಿ‌ ತಂದರೆ ಒಳ್ಳೆಯದು. ಜನರೇ ಈ ಬಗ್ಗೆ ಮುಂಜಾಗ್ರತೆ ವಹಿಸಬೇಕಾಗಿದೆ ಎಂದು ಅವರು ಈ ಹಿಂದೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದರು.

ಜಿಲ್ಲೆಯಲ್ಲಿ ಮಾರ್ಚ್ ತಿಂಗಳಲ್ಲಿ 28 ಕೊರೊನಾ‌ ಸಾವು ಸಂಭವಿಸಿದೆ. ಏಪ್ರಿಲ್ ತಿಂಗಳ 7 ದಿನಗಳಲ್ಲಿ 12 ಸಾವುಗಳು ಸಂಭವಿಸಿದೆ. ಈ ಎಲ್ಲಾ ಕಾರಣಗಳನ್ನು ಮುಂದಿಟ್ಟುಕೊಂಡು ಕಟ್ಟು ನಿಟ್ಟಿನ ಕ್ರಮ ಜಾರಿ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿಂದು 304 ಜನರಿಗೆ ಕೊರೊನಾ ದೃಢಪಟ್ಟಿದೆ ಎಂದು ಹೇಳಿದ್ದರು.

ನಗರ ಪ್ರದೇಶಗಳಲ್ಲಿ ಜಾತ್ರೆ ಊರ ಹಬ್ಬಗಳು ರದ್ದಾಗಿದೆ. ಮದುವೆ ಸಭಾಂಗಣದಲ್ಲಿ ಒಳಾಂಗಣ 200 ಜನ ಹಾಗೂ ಹೊರಾಂಗಣಕ್ಕೆ 500 ಜನಕ್ಕೆ ಅವಕಾಶ ಕಲ್ಪಿಸಲಾಗಿದೆ. ಎಸಿಪಿ ಇಂದ‌ ಅನುಮತಿಯನ್ನು ಪಡೆಯಬೇಕು‌. ಅನುಮತಿ ಪಡೆದವರಿಗೆ ಕೊವಿಡ್ ನಿಯಮ ಕಡ್ಡಾಯವಾಗಿರುತ್ತದೆ. ಪ್ರವಾಸಿತಾಣಗಳಿಗೆ ಬರುವವರು ಆರೋಗ್ಯ ದೃಷ್ಟಿಯಿಂದ ಕೊವಿಡ್ ಟೆಸ್ಟ್ ಮಾಡಿಸಿದರೆ ಒಳ್ಳೆಯದು‌ ಎಂದು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಜಿಲ್ಲೆಯಲ್ಲಿ ಪ್ರವಾಸಿ ಸ್ಥಳಗಳನ್ನು ಬಂದ್ ಮಾಡಲ್ಲ; ಮೈಸೂರು ಡಿಸಿ ರೋಹಿಣಿ ಸಿಂಧೂರಿ ಸ್ಪಷ್ಟನೆ

ಮೈಸೂರಿನಲ್ಲಿ ಕೊರೊನಾ ನೆಗೆಟಿವ್ ರಿಪೋರ್ಟ್ ಇದ್ದರಷ್ಟೆ ಸಿನಿಮಾ ವೀಕ್ಷಣೆಗೆ ಅವಕಾಶ: ಏಪ್ರಿಲ್ 10 ರಿಂದ 20 ರವರೆಗೆ ಅನ್ವಯ!

Published On - 11:02 pm, Fri, 9 April 21

ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ
ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ
ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ
ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ