ಮಂಡ್ಯ: ಜಿಲ್ಲೆಯಲ್ಲಿ ಕೋವಿಡ್ಗೆ ಕೊರೊನಾ ವಾರಿಯರ್ ಬಲಿಯಾಗಿದ್ದಾರೆ. ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ ವೈದ್ಯ ಕೊರೊನಾಗೆ ಬಲಿಯಾಗಿದ್ದಾರೆ.
ಮಂಡ್ಯ ಜಿಲ್ಲೆ ಕೆ.ಆರ್ ಪೇಟೆಯಲ್ಲಿ ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ 60 ವರ್ಷದ ವೈದ್ಯ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರು ಮೂಲತಹ ಮೈಸೂರಿನ ನಿವಾಸಿಯಾಗಿದ್ದರು.
ಮಂಡ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದರು. ನಿನ್ನೆಯಷ್ಟೆ ಇವರಿಗೆ ಪಾಸಿಟಿವ್ ಇರೋದು ದೃಢಪಟ್ಟಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕೆ.ಆರ್ ಪೇಟೆಯಲ್ಲಿ ಅವರು ನಡೆಸುತ್ತಿದ್ದ ಖಾಸಗಿ ಕ್ಲಿನಿಕ್, ಮೆಡಿಕಲ್ ಶಾಪ್ ಸೀಲ್ಡೌನ್ ಮಾಡಲಾಗಿದೆ.