ಫ್ರೀ ಕಾಶ್ಮೀರ ಪೋಸ್ಟರ್ ಪ್ರಕರಣ: ನಳಿನಿ ಪರ ವಕಾಲತ್ತು ವಹಿಸದಿರಲು ವಕೀಲರ ತೀರ್ಮಾನ
ಮೈಸೂರು: ದೆಹಲಿಯ ಜೆಎನ್ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಮೈಸೂರು ವಿವಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ವಿದ್ಯಾರ್ಥಿನಿ ನಳಿನಿ ಫ್ರೀ ಕಾಶ್ಮೀರ ಪೋಸ್ಟರ್ ಪ್ರದರ್ಶಿಸಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಪ್ರಕರಣ ಸಂಬಂಧ ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದ ನಳಿನಿ, ಕೋರ್ಟ್ ಮುಂದೆಯೇ ರಂಪಾಟ ನಡೆಸಿದ್ದಾರೆ. ವಕಾಲತ್ತು ವಹಿಸದಿರಲು ವಕೀಲರ ಸಂಘ ನಿರ್ಧಾರ: ನಳಿನಿ ಮೇಲೆ ರಾಷ್ಟ್ರ ವಿರೋಧಿ ಕೇಸ್ ದಾಖಲಾಗಿರುವ ಹಿನ್ನೆಲೆಯಲ್ಲಿ ನಳಿನಿ ಪರ ವಕಾಲತ್ತು ವಹಿಸದಿರಲು ಮೈಸೂರು ವಕೀಲರ ಸಂಘ ನಿರ್ಧರಿಸಿದೆ. ಈ ಬಗ್ಗೆ […]
ಮೈಸೂರು: ದೆಹಲಿಯ ಜೆಎನ್ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಮೈಸೂರು ವಿವಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ವಿದ್ಯಾರ್ಥಿನಿ ನಳಿನಿ ಫ್ರೀ ಕಾಶ್ಮೀರ ಪೋಸ್ಟರ್ ಪ್ರದರ್ಶಿಸಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಪ್ರಕರಣ ಸಂಬಂಧ ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದ ನಳಿನಿ, ಕೋರ್ಟ್ ಮುಂದೆಯೇ ರಂಪಾಟ ನಡೆಸಿದ್ದಾರೆ.
ವಕಾಲತ್ತು ವಹಿಸದಿರಲು ವಕೀಲರ ಸಂಘ ನಿರ್ಧಾರ: ನಳಿನಿ ಮೇಲೆ ರಾಷ್ಟ್ರ ವಿರೋಧಿ ಕೇಸ್ ದಾಖಲಾಗಿರುವ ಹಿನ್ನೆಲೆಯಲ್ಲಿ ನಳಿನಿ ಪರ ವಕಾಲತ್ತು ವಹಿಸದಿರಲು ಮೈಸೂರು ವಕೀಲರ ಸಂಘ ನಿರ್ಧರಿಸಿದೆ. ಈ ಬಗ್ಗೆ ಸಂಘದ ಅಧ್ಯಕ್ಷ ಆನಂದ ಕುಮಾರ್‌ಗೆ ಸದಸ್ಯರು ಮನವಿ ಸಲ್ಲಿಸಿದ್ದರು. ವಕೀಲರ ಮನವಿಗೆ ಸ್ಪಂದಿಸಿದ ಜಿಲ್ಲಾ ವಕೀಲರ ಸಂಘವು ನಳಿನಿ ಪರ ವಕಾಲತ್ತು ವಹಿಸದಿರಲು ತೀರ್ಮಾನಿಸಿದೆ.
Published On - 2:20 pm, Tue, 14 January 20